ಹಿಂಗೋಲಿ: ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿಗೆ ಬಿಸ್ಕತ್ತು ಹಾಗೂ ಹಣದ ಆಮಿಷವೊಡ್ಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತೆ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆಯಲ್ಲಿ ಭಾಗಿಯಾಗಿದ್ದ ನಾಲ್ವರೂ ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೊಂದೆಡೆ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸಂತ್ರಸ್ತೆಯ ತಾಯಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ತಮ್ಮ ಪಕ್ಷವು ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಸಂಪೂರ್ಣ ಬೆಂಬಲ ನೀಡಲಿದೆ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.





Leave a comment