Home ಕ್ರೈಂ ನ್ಯೂಸ್ ಜೈಲಲ್ಲಿ ಮೊಬೈಲ್, ಮಾದಕ ವಸ್ತುಗಳ ಸೇರಿ ಅಕ್ರಮ ಚಟುವಟಿಕೆಗಳಿಗೆ ಬೀಳುತ್ತೆ ಬ್ರೇಕ್: “ಕಾರಾಗೃಹಗಳ ಭದ್ರತೆಗೆ ಬಂತು ಆಧುನಿಕ ತಂತ್ರಜ್ಞಾನದ ಸ್ಪರ್ಶ”!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಜೈಲಲ್ಲಿ ಮೊಬೈಲ್, ಮಾದಕ ವಸ್ತುಗಳ ಸೇರಿ ಅಕ್ರಮ ಚಟುವಟಿಕೆಗಳಿಗೆ ಬೀಳುತ್ತೆ ಬ್ರೇಕ್: “ಕಾರಾಗೃಹಗಳ ಭದ್ರತೆಗೆ ಬಂತು ಆಧುನಿಕ ತಂತ್ರಜ್ಞಾನದ ಸ್ಪರ್ಶ”!

Share
ಕಾರಾಗೃಹ
Share

ಬೆಂಗಳೂರು: ಕಾರಾಗೃಹಗಳ ಭದ್ರತೆಗೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ಸಿಗಲಿದೆ.

2026 – 27ರ ಬಜೆಟ್ ಘೋಷಣೆಯಂತೆ ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ “ಆಪರೇಷನ್ ಶುದ್ದೀಕರಣ”ದ ಅಡಿಯಲ್ಲಿ ಈ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

ಮೊಬೈಲ್, ಮಾದಕವಸ್ತುಗಳು ಹಾಗೂ ಇನ್ನಿತರ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು Artificial Intrusion Detection System, ಸಿಸಿಟಿವಿ, ಬಾಡಿವೋರ್ನ್ ಕ್ಯಾಮೆರಾ, Infrared(IR) ಸಿಸಿಟಿವಿ ಕ್ಯಾಮೆರಾಗಳು,
X-Ray Baggage Scanner ಗಳು ಸೇರಿದಂತೆ ಇನ್ನಿತರ ಅತ್ಯಾಧುನಿಕ ಭದ್ರತಾ ತಪಾಸಣಾ ಉಪಕರಣಗಳನ್ನು ₹20 ಕೋಟಿ ವೆಚ್ಚದಲ್ಲಿ ಖರೀದಿಸುವ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಾರಗೃಹಗಳಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದಕ್ಕೆ ಮತ್ತು ಭದ್ರತೆಯನ್ನು ಹೆಚ್ಚಿಸುವುದಕ್ಕೆ ಈ ಯೋಜನೆಯು ಪರಿಣಾಮಕಾರಿಯಾಗಿ ಪ್ರಯೋಜನವಾಗಲಿದೆ ಎಂದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles