Home ಕ್ರೈಂ ನ್ಯೂಸ್ ಶಾಲೆ ಆರಂಭಕ್ಕೆ ಮುನ್ನವೇ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ: ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ ಅರೆಸ್ಟ್!
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಶಾಲೆ ಆರಂಭಕ್ಕೆ ಮುನ್ನವೇ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ: ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ ಅರೆಸ್ಟ್!

Share
ಪ್ರಾಂಶುಪಾಲ
Share

ನಾಂಡೇಡ್: ಮಹಾರಾಷ್ಟ್ರದ ನಾಂಡೇಡ್ ಜಿಲ್ಲೆಯಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದ್ದು, 10 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 50 ವರ್ಷದ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪ್ರಾಂಶುಪಾಲ ರವಿ ಸೋನವಣೆ, ಶಾಲಾ ತರಗತಿಗಳು ಆರಂಭವಾಗುವ ಮುಂಚೆಯೇ ಬಾಲಕಿಯನ್ನು ಶಾಲೆಗೆ ಕರೆಸಿ ಈ ಕೃತ್ಯ ಎಸಗಿದ್ದಾರೆ. ಬಾಲಕಿ ಧೈರ್ಯ ಮಾಡಿ ವಿರೋಧಿಸಿ ಕಿರುಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಬಾಲಕಿ ತನ್ನ ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೊ (POCSO) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿದ್ದಾರೆ.

ಅದೇ ಜಿಲ್ಲೆಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯದ ಎರಡು ಪ್ರಕರಣಗಳು ವರದಿಯಾಗಿರುವುದು ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ತೀವ್ರ ಕಳಳವಳ ಮೂಡಿಸಿದೆ.

Share

Recent Posts

Recent Comments

No comments to show.
Related Articles