ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆ ವಿವಿಯ ಆವರಣದಲ್ಲಿ ವಿದ್ಯಾರ್ಥಿನಿ ಅಪಹರಿಸಲು ಬಂದ ಯುವಕರ್ಯಾರು…? ಆಕೆ ತಾಯಿ ಜೊತೆಗಿದ್ದದ್ದು ಯಾಕೆ…?

On: September 8, 2023 3:35 AM
Follow Us:
Crime
---Advertisement---

SUDDIKSHANA KANNADA NEWS/ DAVANAGERE/ DATE: 08-09-2023

ದಾವಣಗೆರೆ (Davanagere):ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಇಬ್ಬರು ಯುವಕರು ಅಪಹರಿಸಲು ಯತ್ನಿಸಿದ ವಿಡಿಯೋ ವೈರಲ್ ಆಗಿದೆ. ದಾವಣಗೆರೆ ತಾಲೂಕಿನ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ಸುದ್ದಿಯನ್ನೂ ಓದಿ: 

Davanagere: ದಾವಣಗೆರೆಯಲ್ಲಿ ಶುಕ್ರವಾರ ಎಲ್ಲೆಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಆಗಲಿದೆ…?

ಚಿತ್ರದುರ್ಗ ಮೂಲದ ವಿದ್ಯಾರ್ಥಿನಿಯನ್ನು ಅಪಹರಣ ಮಾಡಲು ಯತ್ನಿಸಲಾಗಿದೆ. ದಾವಣಗೆರೆ ವಿವಿಯಲ್ಲಿ ಈ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ವಿಶ್ವವಿದ್ಯಾನಿಲಯ ಆವರಣಕ್ಕೆ ಬಂದ ಇಬ್ಬರು ಯುವಕರು ಆಕೆಯನ್ನು
ಎಳೆದುಕೊಂಡು ಕಾರಿನಲ್ಲಿ ಕೂರಿಸಿಕೊಳ್ಳಲು ಮುಂದಾಗಿದ್ದಾರೆ. ಆಗ ರಕ್ಷಣೆಗಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಯುವತಿಯ ಚೀರಾಟ ಕೇಳುತ್ತಿದ್ದಂತೆ ಕಾರಿನ ಬಳಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಆಗಮಿಸಿ ಆಕೆಯನ್ನು ಕಾರಿನಿಂದ ಕೆಳಗಡೆ ಇಳಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದುಕೊಂಡು ಹೋಗುವುದು ಸರಿಯಲ್ಲ ಎಂದು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದ್ದ ವಿದ್ಯಾರ್ಥಿನಿಯು ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಕೆಯ ಹೇಳಿಕೆ ಪಡೆದ ಪೊಲೀಸರು ವಿಶ್ವವಿದ್ಯಾಲಯಕ್ಕೆ ವಾಪಸ್ ಕಳುಹಿಸಿದ್ದಾರೆ.

ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಚಾರಣೆ ನಡೆಸಿದಾಗ ಇಬ್ಬರು ಯುವಕರ ಜೊತೆಗೆ ವಿದ್ಯಾರ್ಥಿನಿಯ ತಾಯಿಯೂ ಸಹ ಇದ್ದರು. ಈ ಕಾರಣಕ್ಕೆ ಯುವಕರು ಹಾಗೂ ಆಕೆಯ ತಾಯಿಗೆ ಬುದ್ದಿವಾದ ಹೇಳಿ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment