ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತೊಗರಿ ಬೆಳೆಗಾರರಿಗೆ ಸಂತಸದ ಸುದ್ದಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ

On: February 10, 2025 8:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-02-2025

ಬೆಂಗಳೂರು: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550 ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450 ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000 ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ತಿಂಗಳಿನಲ್ಲಿ ಭರವಸೆ ನೀಡಿದ್ದರು.

ಈ ಸಂಬಂಧ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment