ದಾವಣಗೆರೆ: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ ದುರಂತಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂದರ್ಶಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಜಿಲ್ಲಾಡಳಿತಕ್ಕೆ ತಕ್ಷಣದೇ ಒದಗಿಸಬೇಕು.
ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ https://docs.google.com/forms/
ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕಾರ್ಯಾಚರಣೆ ಕೇಂದ್ರ 24*7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1077 (ಟೋಲ್ ಫ್ರೀ) ಅಥವಾ 7259700555,9480803201 & 9060798768 ಸಂಖ್ಯೆಗೆ ಕರೆ ಮಾಡಬಹುದು. ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ನೀಡಿದೆ.
ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ನೇರವಾಗಿ ಅಥವಾ ವಾಟ್ಸಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ನೀಡಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.





Leave a comment