Home ದಾವಣಗೆರೆ ಈಗಲೇ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎಗೆ 326 ಸೀಟು: ಇಂಡಿಯಾ ಒಕ್ಕೂಟಕ್ಕೆ 185 ಸ್ಥಾನವಷ್ಟೇ? ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯಲ್ಲಿ ಬಹಿರಂಗ!
ದಾವಣಗೆರೆನವದೆಹಲಿಬೆಂಗಳೂರು

ಈಗಲೇ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎಗೆ 326 ಸೀಟು: ಇಂಡಿಯಾ ಒಕ್ಕೂಟಕ್ಕೆ 185 ಸ್ಥಾನವಷ್ಟೇ? ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯಲ್ಲಿ ಬಹಿರಂಗ!

Share
ಚುನಾವಣೆ
Share

ನವದೆಹಲಿ: ಇಂದೇ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 326 ಸ್ಥಾನಗಳನ್ನು ಗೆದ್ದು ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ‘ಇಂಡಿಯಾ ಟುಡೇ – ಸಿವೋಟರ್’ ನಡೆಸಿರುವ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆ ತಿಳಿಸಿದೆ.

ಜನವರಿಯಲ್ಲಿ ನಡೆದ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ 26 ಸೀಟುಗಳನ್ನು ಕಳೆದುಕೊಂಡಿದೆಯಾದರೂ, ಬಹುಮತಕ್ಕಿಂತ ಹೆಚ್ಚಿನ ಬೆಂಬಲವನ್ನು ಉಳಿಸಿಕೊಂಡಿದೆ. ಈ ಸಮೀಕ್ಷೆಯ ಪ್ರಕಾರ ಬಿಜೆಪಿ ಸ್ವತಂತ್ರವಾಗಿ 261 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.

ಇನ್ನೊಂದೆಡೆ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟ 185 ಸ್ಥಾನಗಳನ್ನು ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷವೊಂದೇ 106 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ಬಲ ಹೆಚ್ಚಿಸಿಕೊಳ್ಳುವ ಲಕ್ಷಣ ಗೋಚರಿಸಿದೆ. ಪರೀಕ್ಷಾ ಅಕ್ರಮಗಳು ಮತ್ತು ಯುವಜನರ ಪ್ರತಿಭಟನೆಗಳ ಕಾರಣದಿಂದ ಬಿಜೆಪಿ ಸಲ್ಪ ಹಿನ್ನಡೆ ಅನುಭವಿಸಿದ್ದರೆ, ಕಾಂಗ್ರೆಸ್ ತನ್ನ ತಂತ್ರಗಾರಿಕೆಯಿಂದ ಪ್ರಗತಿ ಸಾಧಿಸಿದೆ ಎಂದು ಸಮೀಕ್ಷೆಯಲ್ಲಿ ವಿಶ್ಲೇಷಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *