SUDDIKSHANA KANNADA NEWS/ DAVANAGERE/ DATE: 08-09-2023
ದಾವಣಗೆರೆ: ಸೆ.18ಕ್ಕೆ ಗಣೇಶ ಚತುರ್ಥಿ (Ganesh Chaturthi) ಹಾಗೂ ಸೆ.28 ಈದ್ ಮಿಲಾದ್ ಹಬ್ಬ. ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಆಯಾ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗುವ ಏಕಗವಾಕ್ಷಿಯಲ್ಲಿ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಬೇಕು. ಈ ಹಿಂದಿನ ಹಳೆಯ ಪದ್ಧತಿ, ನಿಯಮ ಅನುಸರಿಸಿ ಎಲ್ಲಾ ರೀತಿಯ ಸಿದ್ಧತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಹೊಸದಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಲಾಗಿದೆ.
ಈ ಸುದ್ದಿಯನ್ನೂ ಓದಿ:
ಸುದ್ದಿಕ್ಷಣ ಮೀಡಿಯಾದಲ್ಲಿ ಮಾತ್ರ: ಷೇರುಪೇಟೆ(Stock market)ಯಲ್ಲಿ ಮುಂದುವರೆದ ಗೂಳಿಯ ನಾಗಾಲೋಟ : 19800 ರ ಗಡಿ ದಾಟಿದ ನಿಫ್ಟಿ !!!
ಗಣೇಶ ಚತುರ್ಥಿ (Ganesh Chaturthi) ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕು. ಇಲಾಖೆಯಿಂದ ನೀಡುವ ಸೂಚನೆಗಳನ್ನು ನಿರ್ಬಂಧ ಎಂದುಕೊಳ್ಳಬಾರದು. ಎಲ್ಲರೂ ಕಾನೂನನ್ನು ಗೌರವಿಸಬೇಕು, ಇಲಾಖೆಯು ಸಹ ಎಲ್ಲರಿಗೂ ಸಹಕಾರ ನೀಡಲಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ (Ganesh Chaturthi) ಮತ್ತು ಸೆ. 28 ರಂದು ನಡೆಯಲಿರುವ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದಯುತವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಕರೆಯಲಾದ
ಸೌಹಾರ್ದ ಸಭೆಯಲ್ಲಿ ಈ ಸೂಚನೆಗಳನ್ನು ನೀಡಲಾಗಿದೆ. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸೂಚನೆಗಳು ಹಾಗೂ ಎಚ್ಚರಿಕೆಗಳನ್ನು ನೀಡಿದ್ದಾರೆ.
ಗಣೇಶ ಚತುರ್ಥಿ (Ganesh Chaturthi)ಗೆ ಕೊಟ್ಟಿರುವ ಸೂಚನೆಗಳು ಏನು…?
- ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಬೆಳಕು, ಸಿ.ಸಿ ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು.
- ಆಯೋಜಕರೇ ಸಂಪೂರ್ಣ ಹೊಣೆ ಹೊರಬೇಕು.
- ಯಾವುದೇ ವಿದ್ಯುತ್ ಅವಘಡಗಳು ನಡೆಯದಂತೆ ಮೂರ್ತಿಗಳ ಕಡಿಮೆ ಎತ್ತರ, ಗಣಪತಿ ಅಲಂಕಾರ ಹಾಗೂ ಸಣ್ಣ ಗೋಪುರಗಳ ನಿರ್ಮಾಣ ಮಾಡಬೇಕು.
ಗಣೇಶ ಚತುರ್ಥಿ (Ganesh Chaturthi)ಗೆ ಕೊಟ್ಟಿರುವ ಎಚ್ಚರಿಕೆಗಳೇನು…?
- ಧ್ವನಿವರ್ಧಕಗಳಿಗೆ ಬೆಳಗ್ಗೆ 6 ರಿಂದ ರಾತ್ರಿ 10ಗಂಟೆಯವರೆಗೆ ಮಾತ್ರ ಅನುಮತಿ
- ಹಬ್ಬಗಳ ಆಚರಣೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿಗಳು ಕಂಡು ಬಂದಲ್ಲಿ ಕಾನೂನು ಕ್ರಮ
- ಆಚರಣೆಗೆ ಬಲವಂತವಾಗಿ ದೇಣಿಗೆ ಸಂಗ್ರಹಿಸಬಾರದು.
- ಅಹಿತಕರ ಘಟನೆಗಳು ನಡೆದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಬೇಕು.
- ಹಬ್ಬದ ಆಚರಣೆಗಳಲ್ಲಿ ಪ್ರಚೋದನಾಕಾರಿ ಹೇಳಿಕೆ, ಅಸಭ್ಯ ವರ್ತನೆ ಕಂಡು ಬಂದರೆ ಕಾನೂನು ಕ್ರಮ ಖಚಿತ.
- ಕೆಲವು ಪೆಟ್ಟಿ ಶಾಪ್ ಗಳು, ಡಾಬಾ ಹೋಟೆಲ್ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ದೂರು
- ಅಬಕಾರಿ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ.
- ಹಬ್ಬದ ವೇಳೆ ಬಂಟಿಂಗ್ಸ್, ಫ್ಲೆಕ್ಸ್ ಅಳವಡಿಸಲು ನಿಗದಿತ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಅಳವಡಿಸಬೇಕು
ಗಣೇಶ ಚತುರ್ಥಿ (Ganesh Chaturthi) ಬಗ್ಗೆ ಡಿಸಿ ಏನ್ ಹೇಳಿದ್ರು…?
ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಕರೆ ನೀಡಿದರು.
ಎಲ್ಲರೂ ಒಂದೇ ಕುಟುಂಬದ ಸದಸ್ಯರಿದ್ದಂತೆ, ಎಲ್ಲರೂ ಸೇರಿ ಜಿಲ್ಲೆಯನ್ನು ಅಭಿವೃದ್ದಿಯೆಡೆಗೆ ಕೊಂಡೊಯ್ಯಬೇಕಾಗಿದೆ. ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸಾಮರಸ್ಯ ಇರಬೇಕು. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿರಿ, ಜಿಲ್ಲಾ ಆಡಳಿತ ಎಲ್ಲಾ ಕ್ರಮ ಕೈಗೊಳ್ಳಲಿದೆ. ಹಬ್ಬದಲ್ಲಿ ಯಾರಿಗೂ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಬೆಸ್ಕಾಂನಿಂದ ನಿರಂತರ ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ರಸ್ತೆಯಲ್ಲಿನ ಗುಂಡಿ ಮುಚ್ಚಿ:
ಗಣೇಶ ಚತುರ್ಥಿ (Ganesh Chaturthi) ಮತ್ತು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ, ಈ ಎರಡೂ ಹಬ್ಬಗಳ ಮೆರವಣಿಗೆ ವೇಳೆ ಪ್ರಥಮ ಚಿಕಿತ್ಸೆ ವ್ಯವಸ್ಥೆ, ಅಂಬುಲೆನ್ಸ್ ವ್ಯವಸ್ಥೆ, ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವಂತೆ ನಾಗರೀಕರು ಮನವಿ ಮಾಡಿದ್ರು.
ದಾವಣಗೆರೆಯಲ್ಲಿ 1992 ರ ನಂತರ ಎಲ್ಲಾ ಹಬ್ಬಗಳನ್ನು ಬಹಳ ಸೌಹಾರ್ದತಯುತವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಸೌಹಾರ್ದತೆ ಇಲ್ಲದಿದ್ದಲ್ಲಿ ನಗರದ ಅಭಿವೃದ್ದಿ ಕುಂಠಿತವಾಗುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಒಕ್ಕೊರಲಿನಿಂದ ತಿಳಿಸಿ ಕುಡಿಯುವ ನೀರಿನ ಪೂರೈಕೆ, ಕಸ ವಿಲೇವಾರಿ, ಸಾರ್ವಜನಿಕ ಶಾಂತಿ ಕಾಪಾಡಲು ಹಬ್ಬದ ವೇಳೆ ಮದ್ಯಪಾನ ನಿಷೇಧ, ಸುಗಮ ಮೆರವಣಿಗೆಗೆ ಅವಕಾಶ ಮಾಡಿಕೊಡಲು ಮನವಿ ಮಾಡಿದರು.
ಸಿಇಒ ಏನು ಹೇಳಿದ್ರು…?
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ ನೀರಿನ ಮೂಲ ಕಲುಷಿತವಾಗದಂತೆ ಗಣೇಶನ ವಿಸರ್ಜನೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿ ಸಾಗರದಲ್ಲಿ 6 ಜಾಕ್ವೆಲ್ಗಳಿದ್ದು ಅದರ ಒಂದರಲ್ಲಿ ಮಾತ್ರ ಕುಡಿಯಲು ಯೋಗ್ಯವಲ್ಲ ಎಂದು ಈ ಮೊದಲು ಪರೀಕ್ಷಾ ವರದಿಯಲ್ಲಿ ಬಂದಿತ್ತು, ನಂತರದಲ್ಲಿ ಸರಿಯಾದ ವರದಿ ಬಂದಿರುತ್ತದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬೆಲ್ಲದ ಗಣೇಶನ ಪ್ರತಿಷ್ಠಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಪಾಲಿಕೆ ಆಯುಕ್ತೆ ರೇಣುಕಾ ಹೇಳಿದ್ದೇನು..?
ಪಾಲಿಕೆಯಿಂದ ಗಣಪತಿ ವಿಸರ್ಜನೆಗೆ ಆಯ್ದ ಸ್ಥಳಗಳನ್ನು ಗುರುತಿಸಲಾಗುತ್ತದೆ. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವುದು, ನೀರು ಪೂರೈಕೆಯನ್ನು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ರಕ್ಷಣಾಧಿಕಾರಿ ರಾಮಗೊಂಡ ಬಿ.ಬಸರಗಿ ಸೇರಿದಂತೆ ಅನೇಕ ನಾಗರೀಕರ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
Story Summary: