Home ಕ್ರೈಂ ನ್ಯೂಸ್ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಸರ್ಕಾರಿ ಶಾಲೆ ಹೆಡ್‌ಮಾಸ್ಟರ್ ಬಂಧನ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಸರ್ಕಾರಿ ಶಾಲೆ ಹೆಡ್‌ಮಾಸ್ಟರ್ ಬಂಧನ!

Share
ಸರ್ಕಾರಿ
Share

ಹೋಷಿಯಾರ್‌ಪುರ (ಪಂಜಾಬ್): 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 52 ವರ್ಷದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನನ್ನು ಪಂಜಾಬ್‌ನ ಹೋಷಿಯಾರ್‌ಪುರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮಾಹಿತಿಯ ಪ್ರಕಾರ, ಆಗಸ್ಟ್ 11 ರಂದು ಮಧ್ಯಾಹ್ನ 1:30 ರಿಂದ 2:30 ರ ನಡುವೆ ಗ್ರಾಮದ ಸ್ಮಶಾನದ ಬಳಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.

ಹರಿಯಾಣ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಗುರುಬಚನ್ ಸಿಂಗ್ ಅವರು, “ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಗುರುವಾರ ಬಂಧಿಸಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles