Home ಕ್ರೈಂ ನ್ಯೂಸ್ ಅಡಿಕೆ ಬೆಳೆಗಾರರ ಆಕ್ರೋಶ: ದಾವಣಗೆರೆಯಲ್ಲಿ ಎಸಿ ಕಚೇರಿ ಮುತ್ತಿಗೆ ಯತ್ನ, ರೈತರ ಹೋರಾಟ ಹತ್ತಿಕ್ಕಲು ಮುಂದಾದ ಪೊಲೀಸರು!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಅಡಿಕೆ ಬೆಳೆಗಾರರ ಆಕ್ರೋಶ: ದಾವಣಗೆರೆಯಲ್ಲಿ ಎಸಿ ಕಚೇರಿ ಮುತ್ತಿಗೆ ಯತ್ನ, ರೈತರ ಹೋರಾಟ ಹತ್ತಿಕ್ಕಲು ಮುಂದಾದ ಪೊಲೀಸರು!

Share
ಅಡಿಕೆ
Share

ದಾವಣಗೆರೆ: ರಾಜ್ಯ ಸರ್ಕಾರದ ಗುಟ್ಕಾ ನಿಷೇಧದ ಗೊಂದಲಕಾರಿ ನಿರ್ಧಾರದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರ ರಕ್ಷಣೆಗೆ ಆಗ್ರಹಿಸಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ (AC) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ಅಡಿಕೆ ಬೆಲೆ ಕುಸಿತದಿಂದ ಲಕ್ಷಾಂತರ ಬೆಳೆಗಾರರು ಹಾಗೂ ಕಾರ್ಮಿಕರು ಬೀದಿಗೆ ಬೀಳುವಂತಾಗಿದ್ದು, ಸರ್ಕಾರದ ಈ ಜನವಿರೋಧಿ ಧೋರಣೆಯನ್ನು ಖಂಡಿಸಿ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಹರಸಾಹಸ ಪಟ್ಟರು. ಪೊಲೀಸರ ತಡೆ ನಡುವೆಯೂ ಮಾಜಿ ಸಚಿವ ರೇಣುಕಾಚಾರ್ಯ ವಾಹನದಿಂದ ಕೆಳಗೆ ಇಳಿದು ಆಕ್ರೋಶ ವ್ಯಕ್ತಪಡಿಸಿ, ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಪೊಲೀಸರನ್ನು ಬಳಸಿ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬದುಕುಳಿಯುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *