ದಾವಣಗೆರೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ ತಿಂಗಳ ಸೆಪ್ಟೆಂಬರ್ 7 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ರಿಪೇರಿ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆ.7 ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ದೂ.ಸಂ: 8970476050, 9591514154, 9686248369, 6363139123, 9886935603 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
- Canara Bank RSETI Hoskote
- Davangere news updates.
- Free cell phone repair course
- Free mobile repair training
- Rural development India
- Self-employment Training
- Unemployed youth training Karnataka
- ಉಚಿತ ಸೆಲ್ ಫೋನ್ ತರಬೇತಿ
- ಕರ್ನಾಟಕ ಸರ್ಕಾರಿ ತರಬೇತಿ.
- ಕೆನರಾ ಬ್ಯಾಂಕ್ RSETI
- ದಾವಣಗೆರೆ ಸುದ್ದಿ
- ನಿರುದ್ಯೋಗಿಗಳಿಗೆ ಉಚಿತ ತರಬೇತಿ
- ಮೊಬೈಲ್ ರಿಪೇರಿ ಕೋರ್ಸ್
- ಸ್ವಯಂ ಉದ್ಯೋಗ
- ಹೊಸಕೋಟೆ ಸುದ್ದಿ





Leave a comment