Home ಉದ್ಯೋಗ ವಾರ್ತೆ ಕರ್ನಾಟಕದಲ್ಲಿ 15,000 ಶಿಕ್ಷಕರ ಬಂಪರ್ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ, ಸೆಪ್ಟೆಂಬರ್ 7ರವರೆಗೆ ಸಲ್ಲಿಕೆಗೆ ಅವಕಾಶ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಕರ್ನಾಟಕದಲ್ಲಿ 15,000 ಶಿಕ್ಷಕರ ಬಂಪರ್ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ, ಸೆಪ್ಟೆಂಬರ್ 7ರವರೆಗೆ ಸಲ್ಲಿಕೆಗೆ ಅವಕಾಶ

Share
ಕರ್ನಾಟಕ
Share

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ಮತ್ತು ವರ್ಗೀಕರಣ:

ಈ ನೇಮಕಾತಿಯಲ್ಲಿ ಒಟ್ಟು 15,000 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ರೇಷ್ಟ್ ಆಫ್ ಕರ್ನಾಟಕ (ಆರ್‌ಪಿಸಿ) ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರು (GPT): 8,500 ಹುದ್ದೆಗಳು

ಸಹ ಶಿಕ್ಷಕರು (Assistant Master): 4,500 ಹುದ್ದೆಗಳು

ಪ್ರಾಥಮಿಕ ಶಾಲಾ ಶಿಕ್ಷಕರು (PST): 900 ಹುದ್ದೆಗಳು

ದೈಹಿಕ ಶಿಕ್ಷಣ ಶಿಕ್ಷಕರು (PET): 600 ಹುದ್ದೆಗಳು

ಕಂಪ್ಯೂಟರ್ ಸೈನ್ಸ್ ಶಿಕ್ಷಕರು (CST): 500 ಹುದ್ದೆಗಳು

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ: 18 ಆಗಸ್ಟ್ 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಸೆಪ್ಟೆಂಬರ್ 2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2026

ವಯೋಮಿತಿ ಮತ್ತು ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹750 ಹಾಗೂ ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ schooleducation.karnataka.gov.in ಗೆ ಭೇಟಿ ನೀಡಬಹುದು.

Share

Leave a comment

Leave a Reply

Your email address will not be published. Required fields are marked *

Related Articles