SUDDIKSHANA KANNADA NEWS/ DAVANAGERE/ DATE:18-02-2025
ಬಳ್ಳಾರಿ; ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.