ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯಲ್ಲಿ 15 ವರ್ಷದ ಬುಡಕಟ್ಟು ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತದ ಯತ್ನದಿಂದಾಗಿ ಸಂಭವಿಸಿದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆಸ್ಪತ್ರೆಯ ಸೋನಿಕಾ ಎಂಬ ನರ್ಸ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕ ಏರಿದೆ.
ಸರಕಾರಿ ಶಾಲಾ ಶಿಕ್ಷಕನೊಬ್ಬ ಬಾಲಕಿಯನ್ನು ತಿಂಗಳುಗಟ್ಟಲೆ ಲೈಂಗಿಕ ಶೋಷಣೆಗೆ ಒಳಪಡಿಸಿದ್ದು, ಆರೋಗ್ಯ ಹದಗೆಟ್ಟಾಗ ಬಲವಂತವಾಗಿ ಗರ್ಭಪಾತ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಬಾಲಕಿ ಮೃತಪಟ್ಟಿದ್ದಳು. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮುಂದುವರೆಸಿದೆ.





Leave a comment