Home ದಾವಣಗೆರೆ ಬಸವರಾಜ ರಾಯರೆಡ್ಡಿಯವರೇ ಇಸ್ಲಾಂಗೆ ಮತಾಂತರವಾಗಿಬಿಡಿ…. ಹಿಂದು ಧರ್ಮಕ್ಕೆ ನಷ್ಟವಿಲ್ಲ !
ದಾವಣಗೆರೆನವದೆಹಲಿಬೆಂಗಳೂರು

ಬಸವರಾಜ ರಾಯರೆಡ್ಡಿಯವರೇ ಇಸ್ಲಾಂಗೆ ಮತಾಂತರವಾಗಿಬಿಡಿ…. ಹಿಂದು ಧರ್ಮಕ್ಕೆ ನಷ್ಟವಿಲ್ಲ !

Share
ಬಸವರಾಜ ರಾಯರೆಡ್ಡಿ
Share

ಬೆಂಗಳೂರು: ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಬಿಡಲಿ. ಹಿಂದೂ ಧರ್ಮಕ್ಕೆ ನಷ್ಟವಿಲ್ಲ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಧರ್ಮ ಹಾಗೂ ಸಮುದಾಯಗಳಿಗೆ ಸಂಬಂಧಿಸಿದ ಹೇಳಿಕೆಗಳು ಮತ್ತು ರಾಜಕೀಯ ಬೆಳವಣಿಗೆಗಳ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಚಿವರ ಧೋರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಹೇಳಿಕೆಯು ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ನಾನು ದೇವಸ್ಥಾನಕ್ಕೆ ಹೋಗಲು ಇಷ್ಟಪಡಲ್ಲ, ಇಸ್ಲಾಂ ಮಾನವೀಯತೆ, ಕರುಣೆ ಹೊಂದಿರೋ ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಹಜ್‌ ಯಾತ್ರೆ ಕೈಗೊಳ್ಳುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದರು.

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles