Home ದಾವಣಗೆರೆ ಸೆ.1ರ ನಾಳೆ ದಾವಣಗೆರೆ ಬಂದ್: ಭದ್ರಾ ನೀರು ಬಿಡುಗಡೆ, ಗುಟ್ಕಾ ನಿಷೇಧ ವಿರೋಧಿಸಿ ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಬೈಕ್ ರ್ಯಾಲಿ!
ದಾವಣಗೆರೆನವದೆಹಲಿಬೆಂಗಳೂರು

ಸೆ.1ರ ನಾಳೆ ದಾವಣಗೆರೆ ಬಂದ್: ಭದ್ರಾ ನೀರು ಬಿಡುಗಡೆ, ಗುಟ್ಕಾ ನಿಷೇಧ ವಿರೋಧಿಸಿ ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಬೈಕ್ ರ್ಯಾಲಿ!

Share
ದಾವಣಗೆರೆ
Share

ದಾವಣಗೆರೆ: ರಾಜ್ಯ ಸರ್ಕಾರದ ಗುಟ್ಕಾ ನಿಷೇಧ ನಿರ್ಧಾರ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ರೈತರ ಹಿತಾಸಕ್ತಿಗೆ ಧಕ್ಕೆಯಾಗುತ್ತಿರುವುದನ್ನು ಖಂಡಿಸಿ ಸೆಪ್ಟಂಬರ್ 1ರಂದು ಕರೆ ನೀಡಿರುವ ‘ದಾವಣಗೆರೆ ಬಂದ್’ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸೇರಿದ ರೈತರು ಹಾಗೂ ಮುಖಂಡರು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಬೈಕ್ ರ‍್ಯಾಲಿ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಂದ್‌ಗೆ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ರೈತರು ಹಾಗೂ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕಿರುವ ಸರ್ಕಾರವು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟಕ್ಕೆ ವರ್ತಕರು, ಹೋಟೆಲ್ ಮಾಲೀಕರು, ಶಾಲಾ-ಕಾಲೇಜುಗಳು, ರಸಗೊಬ್ಬರ ಮತ್ತು ಕೃಷಿ ಪರಿಕರಗಳ ಅಂಗಡಿಗಳು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಿಕೊಳ್ಳಲಾಗಿದೆ. ರೈತರ ಬದುಕನ್ನು ಉಳಿಸಲು ದಾವಣಗೆರೆಯ ಸಮಸ್ತ ಜನತೆ ಒಗ್ಗಟ್ಟಾಗಿ ಈ ಬಂದ್ ಅನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles