Home ಕ್ರೈಂ ನ್ಯೂಸ್ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರಗಿತ್ತಿ ಅನುಮಾನಾಸ್ಪದ ಸಾವು!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರಗಿತ್ತಿ ಅನುಮಾನಾಸ್ಪದ ಸಾವು!

Share
ಮಮತಾ ಬ್ಯಾನರ್ಜಿ
Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸೋದರಗಿತ್ತಿ ಬ್ರಿಸ್ಟಿ ಮುಖರ್ಜಿ (28) ಅವರು ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮನೆಯ ಎರಡನೇ ಮಹಡಿಯ ಕೊಠಡಿಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ.

ಕುಟುಂಬದ ಮೂಲಗಳ ಪ್ರಕಾರ, ಮೃತ ಬ್ರಿಸ್ಟಿ ಮುಖರ್ಜಿ ಕಳೆದ ಕೆಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು.

ಅಲ್ಲದೆ, ಅವರ ಮತ್ತು ಪತಿ ನಡುವೆ ವಿಚ್ಛೇದನ ಪ್ರಕ್ರಿಯೆ ಕೂಡ ನಡೆಯುತ್ತಿತ್ತು ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಪುರಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles