ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಯುವತಿಯರು ಮತ್ತು ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕುರಿತು 31 ದಿನಗಳ ಉಚಿತ ತರಬೇತಿಯನ್ನು ಸೆ.17 ರಿಂದ ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9481506564 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಗಿರಿಧರ್ ತಿಳಿಸಿದ್ದಾರೆ.
- BPL Card Training
- Canara Bank Rural Training
- Davangere News
- Free Tailoring Training Karnataka
- RUDSETI Training
- Rural Development Schemes
- Sri Dharmasthala Manjunatheshwara Educational Trust
- Women empowerment
- ಉಚಿತ ಟೈಲರಿಂಗ್ ತರಬೇತಿ
- ಕೆನರಾ ಬ್ಯಾಂಕ್ ರುಡ್ಸೆಟ್
- ದಾವಣಗೆರೆ ಸುದ್ದಿ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಮಹಿಳಾ ಸ್ವಾವಲಂಬನೆ
- ರುಡ್ಸೆಟ್ ಸಂಸ್ಥೆ
- ಹೊಲಿಗೆ ತರಬೇತಿ ಕರ್ನಾಟಕ





Leave a comment