Home ಕ್ರೈಂ ನ್ಯೂಸ್ 2 ವರ್ಷಗಳ ಕಾಲ ಅಪ್ರಾಪ್ತ ವಿದ್ಯಾರ್ಥಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಮದರಸಾ ಶಿಕ್ಷಕ ಮುಹಮ್ಮದ್ ಬಷೀರ್ ಬಂಧನ
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

2 ವರ್ಷಗಳ ಕಾಲ ಅಪ್ರಾಪ್ತ ವಿದ್ಯಾರ್ಥಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಮದರಸಾ ಶಿಕ್ಷಕ ಮುಹಮ್ಮದ್ ಬಷೀರ್ ಬಂಧನ

Share
ವಿದ್ಯಾರ್ಥಿ
Share

ಕಣ್ಣೂರು: ಅಪ್ರಾಪ್ತ ವಿದ್ಯಾರ್ಥಿ ಮೇಲೆ ಸತತ ಎರಡು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕನ್ನಡಿಗರು ಸೇರಿದಂತೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿ ಶಿಕ್ಷಕನನ್ನು ಕಣ್ಣೂರು ಪೊಲೀಸರು ಬಂಧಿಸಿದ್ದಾರೆ.

ಮಲಪ್ಪುರಂನ ಮುತ್ತುವಳ್ಳೂರು ಮೂಲದ ಮುಹಮ್ಮದ್ ಬಷೀರ್ ಬಂಧಿತ ಆರೋಪಿ. ಸಂತ್ರಸ್ತ ಮಗು 11 ವರ್ಷದಿಂದ 13 ವರ್ಷದವರೆಗಿನ ಅವಧಿಯಲ್ಲಿ ಈತನಿಂದ ಸತತ ದೌರ್ಜನ್ಯಕ್ಕೆ ಒಳಗಾಗಿತ್ತು. ವಿಷಯವನ್ನು ಯಾರಿಗಾದರೂ ತಿಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಆರೋಪಿ ಮಗುವಿಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಚೋಕ್ಲಿ ಪೊಲೀಸರು ‘ಪೋಕ್ಸೋ’ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಐ ರಾಕೇಶ್, ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿಗಳಾದ ರಜಿಲ್, ಸಬೀಶ್ ಹಾಗೂ ತಿರೂರ್ ಪೊಲೀಸ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.

ಬಂಧಿತ ಆರೋಪಿಯನ್ನು ತಲಶ್ಶೇರಿ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ಕಣ್ಣೂರು ಸೆಂಟ್ರಲ್ ಜೈಲಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles