Home ದಾವಣಗೆರೆ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು: ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನ!
ದಾವಣಗೆರೆಬೆಂಗಳೂರು

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು: ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನ!

Share
ಕರ್ನಾಟಕ
Share

ದಾವಣಗೆರೆ: ಕರ್ನಾಟಕ ಅಲೆಮಾರಿ ಅರೆಅಲೆಮಾರಿ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ಮಾಹಿತಿ ಹಾಗೂ ಸೂಚನೆಗಳು

  • ಅಂತಿಮ ದಿನಾಂಕ: ಸೆಪ್ಟೆಂಬರ್ 30.

  • ಅರ್ಜಿ ಸಲ್ಲಿಸುವ ವಿಧಾನ: ಸೇವಾ ಸಿಂಧು ಪೋರ್ಟಲ್ (sevasindhu.karnataka.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

  • ಸೇವಾ ಕೇಂದ್ರಗಳು: ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.

  • ಅರ್ಹತೆಯ ಪ್ರಮುಖ ಷರತ್ತು: ನಿಗಮದ ಯಾವುದೇ ಯೋಜನೆಯಲ್ಲಿ ಈಗಾಗಲೇ ಪ್ರಯೋಜನ ಪಡೆದಿದ್ದರೆ, ಅಂತಹ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಮರುಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಹೆಚ್ಚಿನ ವಿವರ ಹಾಗೂ ಸಂಪರ್ಕಕ್ಕೆ

  • ಅಧಿಕೃತ ವೆಬ್‌ಸೈಟ್: kaad.karnataka.gov.in

  • ದಾವಣಗೆರೆ ಜಿಲ್ಲಾ ಕಚೇರಿ ಸಂಪರ್ಕ ಸಂಖ್ಯೆ: 08192-230934

1.ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ:

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅಲೆಮಾರಿ/ಅರೆಅಲೆಮಾರಿ ಸಮುದಾಯಕ್ಕೆ ಸೇರಿದ್ದು), ಆಧಾರ್ ಕಾರ್ಡ್, ಪಡಿತರ ಚೀಟಿ (Ration Card), ಬ್ಯಾಂಕ್ ಪಾಸ್‌ಬುಕ್ ಮತ್ತು ಭಾವಚಿತ್ರ.

2.ಸೇವಾ ಕೇಂದ್ರಕ್ಕೆ ಭೇಟಿ ನೀಡಿ:

ನಿಮ್ಮ ಹತ್ತಿರದ ಗ್ರಾಮ ಒನ್ (Grama One) ಅಥವಾ ಕರ್ನಾಟಕ ಒನ್ (Karnataka One) ಕೇಂದ್ರಕ್ಕೆ ಭೇಟಿ ನೀಡಿ.

3.ಆನ್‌ಲೈನ್ ಅರ್ಜಿ ಸಲ್ಲಿಸಿ:

ಸೇವಾ ಸಿಂಧು ಪೋರ್ಟಲ್‌ನಲ್ಲಿ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದ ಸೂಕ್ತ ಯೋಜನೆಯನ್ನು ಆಯ್ಕೆ ಮಾಡಿ ಅರ್ಜಿ ನಮೂದಿಸಿ.

4.ಅಕ್ನಾಲೆಡ್ಜ್‌ಮೆಂಟ್ ಪಡೆಯಿರಿ:

ಅರ್ಜಿ ಸಲ್ಲಿಕೆಯ ನಂತರ ನೀಡುವ ಸ್ವೀಕೃತಿ ಪತ್ರವನ್ನು (Acknowledgement Slip) ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅಲೆಮಾರಿ ಅರೆಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnatka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kaad.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *