Home ದಾವಣಗೆರೆ ದಾವಣಗೆರೆ ಬಂದ್ ನಡೆಸಿದರೂ ಸಿಗಲಿಲ್ಲ ನೀರು: ಸೆ.6ರಿಂದ ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’!
ದಾವಣಗೆರೆಬೆಂಗಳೂರು

ದಾವಣಗೆರೆ ಬಂದ್ ನಡೆಸಿದರೂ ಸಿಗಲಿಲ್ಲ ನೀರು: ಸೆ.6ರಿಂದ ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’!

Share
ದಾವಣಗೆರೆ
Share

ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ರಾಜ್ಯ ಸರ್ಕಾರದ ಆದೇಶದಂತೆ ಸೆಪ್ಟೆಂಬರ್ 6 ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗೆ ನೀರು ಹರಿಸಲು ಅಧಿಕೃತ ನಿರ್ಧಾರ ಕೈಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ, ಕಡೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಹಾಗೂ ಚಳ್ಳಕೆರೆ ತಾಲೂಕುಗಳ ಮೂಲಕ ಗೋನೂರು ಕೆರೆಯವರೆಗೆ ಈ ನೀರಿನ ಹರಿವು ಪ್ರಾಯೋಗಿಕವಾಗಿ ನಡೆಯಲಿದೆ.

ಆದರೆ, ಭದ್ರಾ ಡ್ಯಾಂನಲ್ಲಿ 178 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದ್ದರೂ ತಮ್ಮ ಬೆಳೆಗಳಿಗೆ ನೀರು ಹರಿಸದ ಸರ್ಕಾರದ ನಡವಳಿಕೆಗೆ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್ ಮತ್ತು ಸಾಲು ಸಾಲು ಹೋರಾಟಗಳನ್ನು ನಡೆಸಿದರೂ ದಾವಣಗೆರೆಯನ್ನು ಕಡೆಗಣಿಸಿ ಚಿತ್ರದುರ್ಗಕ್ಕೆ ಆದ್ಯತೆ ನೀಡುತ್ತಿರುವುದು ದ್ರೋಹದ ಕೆಲಸ ಎಂದು ಆಕ್ರೋಶಗೊಂಡಿದ್ದಾರೆ.

ಸೂಚನೆ ಏನು? 

ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು. ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಕಾಲುವೆ / ಹಳ್ಳಗಳಲ್ಲಿ ಈಜಾಡುವುದು ಹಾಗೂ ಇನ್ನಿತರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘಿಸುವುದು. ನಿಗಮದ ಆಸ್ತಿಯಾದ ನೀರಾವರಿ ಕಾಲುವೆ. ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್ಸೆಟ್ ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ಪ್ರಕಾರ ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಬಿ.ಆರ್.ಪ್ರಾಜೆಕ್ಟ್ ವಿಶ್ವೇಶ್ವರಯ್ಯ ಜಲನಿಗಮ, ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಸೂಪರಿಂಟೆಂಡಿಂಗ್ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ, ನೀರಾವರಿ ಇಲಾಖೆಯ ಸೂಪರಿಂಟೆಂಡಿಂಗ್ ಇಂಜಿನಿಯರ್ ಮುನ್ನೆಚ್ಚರಿಕಾ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಸುರಕ್ಷತೆಗಾಗಿ ಕಾಲುವೆ ಹಾಗೂ ಹಳ್ಳಗಳ ಪಾತ್ರಕ್ಕೆ ಜನ-ಜಾನುವಾರುಗಳು ಇಳಿಯುವುದು, ಈಜಾಡುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳಿಂದ ನೀರು ಎತ್ತುವುದು ಹಾಗೂ ಕಾಲುವೆ ಕಟ್ಟಡಗಳನ್ನು ಜಖಂಗೊಳಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles