Home ನವದೆಹಲಿ ‘ತಲೆಬುರುಡೆ ಒಡೆದೆ’ ಎಂದಿದ್ದ ಇನ್‌ಫ್ಲುಯೆನ್ಸರ್ ಸ್ವತಂತ್ರ ಭಾರದ್ವಾಜ್ ಬಂಧನ, ಪೋಕ್ಸೋ ಕೇಸ್ ದಾಖಲು!
ನವದೆಹಲಿಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

‘ತಲೆಬುರುಡೆ ಒಡೆದೆ’ ಎಂದಿದ್ದ ಇನ್‌ಫ್ಲುಯೆನ್ಸರ್ ಸ್ವತಂತ್ರ ಭಾರದ್ವಾಜ್ ಬಂಧನ, ಪೋಕ್ಸೋ ಕೇಸ್ ದಾಖಲು!

Share
ಸ್ವತಂತ್ರ ಭಾರದ್ವಾಜ್
Share

ಹಲಿ/ಬುಲಂದ್‌ಶಹರ್: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಭೀಕರ ಹಲ್ಲೆ ನಡೆಸಿ, “ನಾನು ಆತನ ತಲೆಬುರುಡೆ ಒಡೆದಿದ್ದೇನೆ ಮತ್ತು ನನಗೇನೂ ಆಗುವುದಿಲ್ಲ” ಎಂದು ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದ ‘ಸ್ವತಂತ್ರ ಸನಾತನಿ ಯೋಧ’ ಖ್ಯಾತಿಯ ಸ್ವತಂತ್ರ ಭಾರದ್ವಾಜ್‌ನನ್ನು ಕೊನೆಗೂ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಶುಕ್ರವಾರ ಸಂಜೆ ದೆಹಲಿ ಪೊಲೀಸರ ಕ್ರೈಮ್ ಬ್ರಾಂಚ್ ತಂಡ ವಶಕ್ಕೆ ಪಡೆದಿತ್ತು. ಸಿಜೆಪಿ ಮತ್ತು ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಂತರ, ದೆಹಲಿ ಪೊಲೀಸರು ಈತನ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಬೆದರಿಕೆ ಹಾಕಿದ ಆರೋಪದಡಿಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಶುಕ್ರವಾರ ಬುಲಂದ್‌ಶಹರ್‌ನ ನೈತ್ಲಾ ಗ್ರಾಮದಲ್ಲಿ ತಂಗಿದ್ದ ಈತನನ್ನು ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ವಶಕ್ಕೆ ಪಡೆದಿದ್ದು, ಈತನ ವಿರುದ್ಧ ಎಸ್‌ಸಿ/ಎಸ್‌ಟಿ ಅಟ್ರಾಸಿಟಿ ಕಾಯ್ದೆ ಸೇರಿದಂತೆ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿರೋಧ ಪಕ್ಷಗಳು ಹಾಗೂ ಸಿಜೆಪಿ ಮುಖಂಡರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಎದುರು ತೀವ್ರ ಧರಣಿ ನಡೆಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles