Home ಕ್ರೈಂ ನ್ಯೂಸ್ ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ 9 ಜನರ ದುರಂತ ಸಾವು: ಆಸ್ಪತ್ರೆಗೆ ಹಲವರು ದಾಖಲು!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ 9 ಜನರ ದುರಂತ ಸಾವು: ಆಸ್ಪತ್ರೆಗೆ ಹಲವರು ದಾಖಲು!

Share
ಮಧ್ಯಪ್ರದೇಶ
Share

ಮಧ್ಯಪ್ರದೇಶ: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಅಥವಾ ವಿಷಪೂರಿತ ಮದ್ಯ ಸೇವಿಸಿ ಒಂಬತ್ತು ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಶನಿವಾರ ರಾತ್ರಿ ಮದ್ಯ ಸೇವಿಸಿದ ನಂತರ ವಿವಿಧ ಗ್ರಾಮಗಳ ನಿವಾಸಿಗಳ ಆರೋಗ್ಯ ದಿಢೀರ್ ಕ್ಷೀಣಿಸಿದ್ದು, ದುರಂತ ಸಂಭವಿಸಿದೆ.

ಘಟನೆಯ ವಿವರಗಳ ಪ್ರಕಾರ, ಸಾಗರ್ ಜಿಲ್ಲೆಯ ಘೂಘರ್, ನೌರಾಜ್, ಬರಾಜ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಶನಿವಾರ ರಾತ್ರಿ ಮದ್ಯ ಸೇವಿಸಿದ್ದರು. ಮದ್ಯ ಸೇವಿಸಿದ ಕೆಲವೇ ಸಮಯದಲ್ಲಿ ಅವರೆಲ್ಲರಿಗೂ ತೀವ್ರ ವಾಂತಿ ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಘಟನಾ ಸ್ಥಳಕ್ಕೆ ತಲುಪಿರುವ ಪೋಲಿಸ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸ್ಥಳೀಯರಿಂದ ಮತ್ತು ಮೃತರ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ (Post-Mortem) ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಮದ್ಯ ಜಾಲ ಮತ್ತು ಕಳ್ಳಭಟ್ಟಿ ಸರಬರಾಜು ಮಾಡಿದ ಮೂಲವನ್ನು ಪತ್ತೆಹಚ್ಚಲು ದಳಗಳನ್ನು ರಚಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯನ್ನು ಆಡಳಿತ ಮಂಡಳಿ ತಳ್ಳಿಹಾಕಿಲ್ಲ

Share

Leave a comment

Leave a Reply

Your email address will not be published. Required fields are marked *

Related Articles