• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 4, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ, 3.3 ಲಕ್ಷ ಜನರಿಗೆ ಉಚಿತ ಕನ್ನಡಕ: ತಾಯಿ, ಮರಣ ಪ್ರಮಾಣ ಶೂನ್ಯಕ್ಕೆಇಳಿಸಲು 320 ಕೋಟಿ ರೂ.1

Editor by Editor
March 7, 2025
in ದಾವಣಗೆರೆ, ಬೆಂಗಳೂರು
0
1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ, 3.3 ಲಕ್ಷ ಜನರಿಗೆ ಉಚಿತ ಕನ್ನಡಕ: ತಾಯಿ, ಮರಣ ಪ್ರಮಾಣ ಶೂನ್ಯಕ್ಕೆಇಳಿಸಲು 320 ಕೋಟಿ ರೂ.1

SUDDIKSHANA KANNADA NEWS/ DAVANAGERE/ DATE:07-03-2025

ಬೆಂಗಳೂರು: ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ ನಿರ್ಮಾಣ ಸಾಧ್ಯ ಎಂದು ನಾವು ನಂಬಿದ್ದೇವೆ. ಜನನದಿಂದ ಎಲ್ಲಾ ವಯೋಮಾನದವರಿಗೂ ವರ್ಗಬೇಧವಿಲ್ಲದೇ, ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ. ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಲಾಗಿದೆ.

ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು.

ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು.

ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು. ರಾಜ್ಯದಲ್ಲಿ ಸಂಭವಿಸುವ ತಾಯಿ ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್‌ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡಿಸಲಾಗುವುದು. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು.

ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಈ ಕೆಳಕಂಡ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.

ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.

ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.

ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್‌ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.‌

ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು.

ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು.

ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. (ವಿವರಗಳನ್ನು ಅನುಬಂಧ-4ರಲ್ಲಿ ಲಗತ್ತಿಸಿದೆ.)

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿ ವರ್ಗ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ. ಸಿಬ್ಬಂದಿಯ ವೈಯಕ್ತಿಕ ಮಾಸಿಕ ವಂತಿಕೆ. 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂ. ಗಳೊಂದಿಗೆ ಸುವರ್ಣ ಆರೋಗ್ಯ ಟ್ರಸ್ಟ್‌ ಮೂಲಕ ಅನುಷ್ಠಾನಗೊಳಿಸಲಾಗುವುದು.

ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್‌ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು.

ʻಗೃಹ ಆರೋಗ್ಯʼ ಯೋಜನೆಯಡಿ 2024-25 ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು.

ರಾಜ್ಯದಲ್ಲಿ 108 ಆ್ಯಂಬುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವುದರ ಮೂಲಕ ʻಆರೋಗ್ಯ ಕವಚʼ ಸೇವೆಯನ್ನು ಬಲಪಡಿಸಲಾಗುವುದು.

ಸಾಂಕ್ರಾಮಿಕ ರೋಗಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ (KFD) ಪರಿಣಾಮಕಾರಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು.

ʻಶ್ರವಣ ಸಂಜೀವಿನಿʼ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಲಿಯರ್‌ ಇಂಪ್ಲಾಂಟ್‌ (Cochlear Implant) ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು 12 ಕೋಟಿ ರೂ. ಒದಗಿಸಲಾಗುವುದು.

ಹೆಚ್ಚಿನ ಟಿ.ಬಿ ಪ್ರಕರಣಗಳಿರುವ ಆರೋಗ್ಯ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ 100 True-NAT machine ಗಳನ್ನು ಒದಗಿಸಲಾಗುವುದು.

Next Post
ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ! ತಾಲ್ಲೂಕು ಆಸ್ಪತ್ರೆಗಳ ಆಡಳಿತ ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ

ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ! ತಾಲ್ಲೂಕು ಆಸ್ಪತ್ರೆಗಳ ಆಡಳಿತ ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರು ನೂತನವಾಗಿ ಬಿಜಿನೆಸ್ ಪ್ರಾರಂಭ ಮಾಡಿ,  ಈ ರಾಶಿಯವರು ಮದುವೆ ತಯಾರಿ ಆದರೆ ವಿಳಂಬ
  • 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡ ಆರ್ ಸಿಬಿ: 6 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುತ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮ!
  • DAVANAGERE: ದಾವಣಗೆರೆಯಲ್ಲಿ ಬಡವರು, ಮಧ್ಯಮವರ್ಗದವರ ಕೈಗೆಟುಕುವ ದರದಲ್ಲಿ ಮನೆ, ಅಪಾರ್ಟ್ ಮೆಂಟ್ ಗಳ ನಿರ್ಮಾಣ!
  • ಸುಗಮ ಸಂಚಾರಕ್ಕಾಗಿ ನೂತನ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಸ್ಥಳ ಗುರುತಿಸಿ: ಎಸ್. ಎಸ್. ಮಲ್ಲಿಕಾರ್ಜುನ್
  • ದಾವಣಗೆರೆ: ಅರೆಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In