Home ದಾವಣಗೆರೆ NH-48ರಲ್ಲಿ ಅಪಘಾತಕ್ಕೀಡಾದ ಚಿರತೆ ರಕ್ಷಣೆ ವೇಳೆ ರೋಚಕ ಘಟನೆ: ವಿಜಯನಗರ ಪ್ರವಾಸ ಮೊಟಕುಗೊಳಿಸಿ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿದ್ಯಾಕೆ ಸಚಿವ ಕೆ. ಎಸ್. ಬಸವಂತಪ್ಪ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

NH-48ರಲ್ಲಿ ಅಪಘಾತಕ್ಕೀಡಾದ ಚಿರತೆ ರಕ್ಷಣೆ ವೇಳೆ ರೋಚಕ ಘಟನೆ: ವಿಜಯನಗರ ಪ್ರವಾಸ ಮೊಟಕುಗೊಳಿಸಿ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿದ್ಯಾಕೆ ಸಚಿವ ಕೆ. ಎಸ್. ಬಸವಂತಪ್ಪ!

Share
ಚಿರತೆ
Share

ದಾವಣಗೆರೆ: ಅರಣ್ಯ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿರುವ ವಿಷಯ ತಿಳಿಯುತ್ತಿದ್ದಂತೆ ದಾವಣಗೆರೆಯಿಂದ ವಿಜಯನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ತಮ್ಮ ಪ್ರವಾಸವನ್ನು ಕೆಲ ಗಂಟೆಗಳ ಕಾಲ ಮೊಟಕುಗೊಳಿಸಿ ನೇರವಾಗಿ ದಾವಣಗೆರೆಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ತೆರಳಿದರು.

ಚಿಕಿತ್ಸೆ ಪಡೆಯುತ್ತಿದ್ದ ಮರಳಸಿದ್ದಪ್ಪ ಅವರ ಆರೋಗ್ಯ ವಿಚಾರಿಸಿ ವೈದ್ಯರಿಂದ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಚಿರತೆ ಹಾವಳಿ: ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ

ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಗೂ ಜಗಳೂರು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಇತ್ತೀಚೆಗೆ ಚಿರತೆಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ದಾಟುವ ಸಂದರ್ಭದಲ್ಲಿ ವನ್ಯಜೀವಿಗಳು ವಾಹನಗಳಿಗೆ ಸಿಲುಕಿ ಅಪಘಾತಕ್ಕೀಡಾಗುತ್ತಿರುವುದರಿಂದ ಅರಣ್ಯ ಪ್ರದೇಶದಂಚಿನ ಗ್ರಾಮಗಳು ಹಾಗೂ ಹೆದ್ದಾರಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ವನ್ಯಜೀವಿಗಳ ಸಂಚಾರದ ಕುರಿತು ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡಬೇಕು ಎಂದು ನಿರ್ದೇಶನ ನೀಡಿದರು.

Share

Leave a comment

Leave a Reply

Your email address will not be published. Required fields are marked *