ಬೆಂಗಳೂರು: ಕರ್ನಾಟಕ ಸರ್ಕಾರದ ಅಡಿಯಲ್ಲಿ ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಅರಣ್ಯ ಇಲಾಖೆ (KFD) 2026ನೇ ಸಾಲಿನಲ್ಲಿ ಭರ್ತಿ ಮಾಡಲು ಉದ್ದೇಶಿಸಿರುವ ಒಟ್ಟು 750 ಅರಣ್ಯ ವೀಕ್ಷಕ (Forest Observer / Forest Watcher) ಹುದ್ದೆಗಳ ಆನ್ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈಗ ಸೆಪ್ಟೆಂಬರ್ 30, 2026 ರವರೆಗೆ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ. ಬದಲಾಗಿ ಎಸ್ಎಸ್ಎಸ್ಸಿ (SSLC) ಅಂಕಗಳ ಮೆರಿಟ್ ಪಟ್ಟಿ, ದೈಹಿಕ ಪರೀಕ್ಷೆ (Physical Test) ಹಾಗೂ ವೈದ್ಯಕೀಯ ಪರೀಕ್ಷೆಯ (Medical Test) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ: 01-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (ವಿಸ್ತರಿಸಲಾಗಿದೆ): 30-09-2026
ಜಿಲ್ಲಾವಾರು ಹುದ್ದೆಗಳ ವಿವರ:
ಬೆಂಗಳೂರು-70, ಬೆಳಗಾವಿ-42, ಬಳ್ಳಾರಿ-62, ಚಾಮರಾಜನಗರ-169, ಚಿಕ್ಕಬಳ್ಳಾಪುರ-56, ಧಾರವಾಡ-12, ಹಾಸನ್-30, ಕೆನರಾ-60, ಕೊಡಗು-32, ಕಲಬುರಗಿ-4, ಮಂಗಳೂರು-54, ಮೈಸೂರು-120 ಹಾಗೂ ಶಿವಮೊಗ್ಗ-38 ಸೇರಿದಂತೆ ಒಟ್ಟು 750 ಹುದ್ದೆಗಳು ಲಭ್ಯವಿವೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ aranya.gov.in ಗೆ ಭೇಟಿ ನೀಡಿ, ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.





Leave a comment