Home ದಾವಣಗೆರೆ ದಾವಣಗೆರೆ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ ಅಧಿಕಾರ ಸ್ವೀಕಾರ: ಅಧಿಕಾರಿಗಳು, ಸಿಬ್ಬಂದಿಗೆ ಖಡಕ್ ಎಚ್ಚರಿಕೆ!
ದಾವಣಗೆರೆಬೆಂಗಳೂರು

ದಾವಣಗೆರೆ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ ಅಧಿಕಾರ ಸ್ವೀಕಾರ: ಅಧಿಕಾರಿಗಳು, ಸಿಬ್ಬಂದಿಗೆ ಖಡಕ್ ಎಚ್ಚರಿಕೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (CEO) ಯುವ ಐಎಎಸ್ ಅಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ ಅವರು ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ, ಜಿ.ಪಂ. ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದರು. ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಆಡಳಿತ ಯಂತ್ರಕ್ಕೆ ಸ್ಪಷ್ಟ ಸಂದೇಶ ರವಾನಿಸಿದರು.

 ಮುಖ್ಯಾಂಶಗಳು ಹೀಗಿವೆ:

  • ಅಧಿಕಾರ ಸ್ವೀಕಾರ: ದಾವಣಗೆರೆ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

  • ಸಮಗ್ರ ಅಭಿವೃದ್ಧಿಗೆ ಕರೆ: ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜನಪರ ಸೇವೆಗಾಗಿ ಎಲ್ಲರೂ ಒಗ್ಗಟ್ಟಾಗಿ, ಸಮನ್ವಯದಿಂದ ಹಾಗೂ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ.

  • ಪಾರದರ್ಶಕತೆ ಮತ್ತು ಪ್ರಾಮಾಣಿಕತೆ: ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

  • ಜನರಸ್ಪಂದನೆ: ಸಾರ್ವಜನಿಕರ ಸಮಸ್ಯೆಗಳಿಗೆ ಮತ್ತು ಕಷ್ಟಗಳಿಗೆ ಸ್ಪಂದಿಸುವ ಮೂಲಕ ಅವರ ವಿಶ್ವಾಸ ಗಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಅಧಿಕಾರಿಗಳಿಗೆ ಖಡಕ್ ಸಂದೇಶ: ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನಪರ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಇಲಾಖಾ ಅಧಿಕಾರಿಯೂ ಅತ್ಯಂತ ಸಮನ್ವಯದಿಂದ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಅತ್ಯಗತ್ಯವಾಗಿದ್ದು, ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲು ತಾಕೀತು ಮಾಡಿದರು.

ಸಾರ್ವಜನಿಕರು ತಮ್ಮ ವಿವಿಧ ಕೆಲಸಗಳಿಗಾಗಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಅವರ ವಿಶ್ವಾಸವನ್ನು ಗಳಿಸಬೇಕು ಎಂದು ನೂತನ ಸಿಇಒ ಸಾಹಿತ್ಯ ಎಂ. ಆಲದಕಟ್ಟಿ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Related Articles