ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹಿಂ ಕಲೀಲ್ ಉಲ್ಲಾಗೆ ಹೈಕಮಾಂಡ್ ಅವಕಾಶ ನೀಡಿದೆ. ಮಾತ್ರವಲ್ಲ, ಘಟಾನುಘಟಿಗಳಿಗೆ ಈ ಮೂಲಕ ಶಾಕ್ ಕೊಟ್ಟಿದೆ.
ಕಾಂಗ್ರೆಸ್ ಪಕ್ಷದ ಹಿರಿಯರು ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಮಂದಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಇವರ್ಯಾರನ್ನು ಪರಿಗಣಿಸದೇ ಇಬ್ರಾಹಿಂ ಕಲೀಲ್ ಉಲ್ಲಾಗೆ ಜವಾಬ್ದಾರಿ ವಹಿಸಿದೆ.
ನಿಷ್ಠೆ ಹಾಗೂ ಯುವ ನಾಯಕತ್ವಕ್ಕೆ ಸಿಕ್ಕ ಮನ್ನಣೆ:
ಎನ್ಎಸ್ಯುಐ (NSUI) ಮತ್ತು ಯುವ ಕಾಂಗ್ರೆಸ್ ಅಂಗಳದಿಂದ ಬೆಳೆದು ಬಂದ ಇಬ್ರಾಹಿಂ ಕಲೀಲ್ ಉಲ್ಲಾ ಅವರು ಸಂಘಟನಾತ್ಮಕವಾಗಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇರ ಸೂಚನೆಯಂತೆ ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಸಂಚರಿಸಿ ಪಕ್ಷದ ಪರವಾಗಿ ಧುರೀಣ ಪ್ರಚಾರ ನಡೆಸಿದ್ದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇತೂರು ರಸ್ತೆಯ ನಿವಾಸಿಯಾಗಿರುವ ಇಬ್ರಾಹಿಂ, ಜಿಲ್ಲೆಯ ಪ್ರಭಾವಿ ನಾಯಕರಾದ ಸಚಿವ ರಿಜ್ವಾನ್ ಅರ್ಷದ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೂ ಅತ್ಯಂತ ಆಪ್ತರಾಗಿದ್ದಾರೆ.
ಹತ್ತು ವರ್ಷಗಳ ಅಧ್ಯಕ್ಷತೆಯ ಅಂತ್ಯ:
ಕಳೆದ 10 ವರ್ಷಗಳಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸಂಘಟನೆ ಹಾಗೂ ಚುನಾವಣಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಚ್. ಬಿ. ಮಂಜಪ್ಪ ಅವರ ಸುದೀರ್ಘ ಅವಧಿ ಮುಕ್ತಾಯಗೊಂಡಿದ್ದು, ಅವರ ಸ್ಥಾನಕ್ಕೆ ಇಬ್ರಾಹಿಂ ಕಲೀಲ್ ಉಲ್ಲಾ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಮುಸ್ಲಿಂ ಸಮುದಾಯದ ಯುವ ನಾಯಕನಿಗೆ ಈ ಪ್ರಮುಖ ಜವಾಬ್ದಾರಿ ನೀಡುವುದರ ಮೂಲಕ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಮತ್ತು ಯುವ ಪಡೆಗೆ ಹೆಚ್ಚಿನ ಆದ್ಯತೆ ನೀಡಿದಂತಾಗಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಇಬ್ರಾಹೀಂ ಕಲೀಲ್ ಉಲ್ಲಾ ಅವರು 2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರ ಸೂಚನೆಯಂತೆ ದೇಶದ ವಿವಿಧ ರಾಜ್ಯಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು. ಎನ್ ಎಸ್ ಯುಐ, ಯುವ ಕಾಂಗ್ರೆಸ್ ನಲ್ಲಿ ಕಾರ್ಯ ನಿರ್ವಹಿಸಿದ್ದ ಇಬ್ರಾಹೀಂ ಕಲೀಲ್ ಉಲ್ಲಾ ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬರುವವರು. ಬೇತೂರು ರಸ್ತೆಯ ಬಳಿ ಇವರ ನಿವಾಸವಿದ್ದು, ಕಾಂಗ್ರೆಸ್ ಪಕ್ಷದ ನಿಷ್ಠೆ, ಪ್ರಾಮಾಣಿಕತೆ ಸಂಘಟನೆ ಗುರುತಿಸಿ ಈ ಜವಾಬ್ದಾರಿ ವಹಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಳೆದ ಸುಮಾರು ಹತ್ತು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್. ಬಿ. ಮಂಜಪ್ಪರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೆಚ್. ಬಿ. ಮಂಜಪ್ಪರ ಬದಲಿಗೆ ಇಬ್ರಾಹೀಂ ಕಲೀಂ ಉಲ್ಲಾ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.
ಸಚಿವ ರಿಜ್ವಾನ್ ಅರ್ಷದ್ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೂ ಆಪ್ತರಾಗಿರುವ ಇಬ್ರಾಹೀಂ ಕಲೀಂ ಉಲ್ಲಾ ಅವರು ವಿವಿಧ ಚುನಾವಣೆಗಳಲ್ಲಿ ಪಕ್ಷ ವಹಿಸಿದ ಜವಾಬ್ದಾರಿ ನಿಭಾಯಿಸಿದ್ದರು. ದಾವಣಗೆರೆ ಜಿಲ್ಲೆಯಲ್ಲಿ ಮುಸ್ಲಿಂರಿಗೆ ಈ ಬಾರಿಯ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದು ಅಚ್ಚರಿಯ ಆಯ್ಕೆ.





Leave a comment