Home ದಾವಣಗೆರೆ ವಿರೋಧಪಕ್ಷಗಳ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ, ಡಿ. ಕೆ. ಶಿವಕುಮಾರ್ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಬಹುಪರಾಕ್!
ದಾವಣಗೆರೆನವದೆಹಲಿಬೆಂಗಳೂರು

ವಿರೋಧಪಕ್ಷಗಳ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ, ಡಿ. ಕೆ. ಶಿವಕುಮಾರ್ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಬಹುಪರಾಕ್!

Share
ಸಿದ್ದರಾಮಯ್ಯ
Share

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹುಪರಾಕ್ ನೀಡಿದ್ದಾರೆ.

ಸರ್ಕಾರದ ನೂರು ದಿನಗಳ ಗುರುತಾಗಿ ಆಯೋಜಿಸಿರುವ ಸಮಾರಂಭಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಹೊಸ ಯೋಜನೆಗಳನ್ನು ಡಿ. ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಅಭಿವೃದ್ಧಿ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ತಲುಪಿಸಲಿ. ಇನ್ನೂ ಒಂದೂವರೆ ವರ್ಷ ಇದ್ದು ಶಿವಕುಮಾರ್ ಅವರು ಉತ್ತಮ ಆಡಳಿತ ನೀಡಲಿ ಎಂದು ಹಾರೈಸಿದರು.

ಮಂತ್ರಿಯಾಗಿ, ಡಿಸಿಎಂಯಾಗಿ ಡಿ. ಕೆ. ಶಿವಕುಮಾರ್ ಅವರು ರಾಜ್ಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ವಿರೋಧಪಕ್ಷಗಳ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಮಾಡಿದ ಭ್ರಷ್ಟಾಚಾರ ಈ ನಾಡಿನ ಮುಂದೆ ಇದೆ. ಹಾಗಾಗಿ, ಆರೋಪ ಮಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles