ರಾಂಚಿ (ಜಾರ್ಖಂಡ್): ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ 18 ವರ್ಷದ 11ನೇ ತರಗತಿ ವಿದ್ಯಾರ್ಥಿನಿಯನ್ನು ಏಕಮುಖ ಪ್ರೀತಿ ನೆಪದಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ತನ್ನ ನಾಲ್ವರು ಸಹಚರರೊಂದಿಗೆ ಸೇರಿ ಅಪಹರಿಸಿದ್ದ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿನಿಯನ್ನು ಅರಂಗಿ ಅರಣ್ಯ ಪ್ರದೇಶದಿಂದ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಘಟನೆಯ ವಿವರ:
ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಬಿರಿಯಾ ಒರಾನ್ ಎಂಬ ಸೀನಿಯರ್ ವಿದ್ಯಾರ್ಥಿ ತನ್ನ ನಾಲ್ವರು ಸ್ನೇಹಿತರೊಂದಿಗೆ ಬೊಲೆರೊ ಕಾರಿನಲ್ಲಿ ಬಂದು ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ಹೋಗಿದ್ದ. ಈ ವೇಳೆ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇಬ್ಬರು ಸ್ನೇಹಿತೆಯರು ತಕ್ಷಣ ಆಕೆಯ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ನೀಡಿ ದೂರಿನನ್ವಯ ಪೊಲೀಸರು ತಕ್ಷಣ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ರಾತ್ರಿ ಪೂರ್ತಿ ಕಾಡಿನಲ್ಲಿ ಕಾರ್ಯಾಚರಣೆ:
ವಿದ್ಯಾರ್ಥಿನಿಯನ್ನು ರಾತ್ರಿ ಪೂರ್ತಿ ಅರಂಗಿ ಕಾಡಿನಲ್ಲಿ ಅಡಗಿಸಿಡಲಾಗಿತ್ತು. ಪೊಲೀಸರು ಬೆಳಗಿನ ಜಾವ ಸುಮಾರು 4 ಗಂಟೆಗೆ ಅರಣ್ಯಕ್ಕೆ ದಾಳಿ ನಡೆಸಿ ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಬಂಧಿತರು:
ಮುಖ್ಯ ಆರೋಪಿ ಬಿರಿಯಾ ಒರಾನ್ ನೀಡಿದ ಮಾಹಿತಿಯ ಆಧಾರದ ಮೇಲೆ, ಅಪಹರಣದಲ್ಲಿ ಭಾಗಿಯಾಗಿದ್ದ ಮುನ್ನಾ ಒರಾನ್, ಬೀರೇಂದ್ರ ಒರಾನ್, ರಾಜೇಶ್ ಒರಾನ್ ಮತ್ತು ಆಶಿಶ್ ಲೋಹ್ರಾ ಅವರನ್ನು ಪೊಲೀಸರು ಅವರ ಮನೆಗಳಿಂದ ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೊಲೆರೊ ವಾಹನವನ್ನು ಜಪ್ತಿ ಮಾಡಲಾಗಿದೆ.





Leave a comment