Home ಕ್ರೈಂ ನ್ಯೂಸ್ ಹೆಚ್. ಡಿ. ಕುಮಾರಸ್ವಾಮಿ ಅದೇನೋ ಅಲ್ಲೋಲ ಕಲ್ಲೋಲ‌ ಆಗಿದೆಯಲ್ಲ ಬಿಡಿಸಿ ಹೇಳಬೇಕೇ?: ಹೆಚ್ ಡಿಕೆಗೆ ಡಿಕೆಶಿ ಟಾಂಗ್!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಹೆಚ್. ಡಿ. ಕುಮಾರಸ್ವಾಮಿ ಅದೇನೋ ಅಲ್ಲೋಲ ಕಲ್ಲೋಲ‌ ಆಗಿದೆಯಲ್ಲ ಬಿಡಿಸಿ ಹೇಳಬೇಕೇ?: ಹೆಚ್ ಡಿಕೆಗೆ ಡಿಕೆಶಿ ಟಾಂಗ್!

Share
ಹೆಚ್. ಡಿ. ಕುಮಾರಸ್ವಾಮಿ
Share

ಬೆಂಗಳೂರು: “ಅದೇನೋ ಅಲ್ಲೋಲ ಕಲ್ಲೋಲ ಆಗಿದೆಯಲ್ಲ. ಅದನ್ನು ನಾನು ಬಿಡಿಸಿ ಹೇಳಬೇಕೆ? ದಿನವೂ ನಾವು ಟಿವಿಯಲ್ಲಿ ನೋಡುತ್ತಿದ್ದೇವಲ್ಲ”ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೆಚ್. ಡಿ. ಕುಮಾರಸ್ವಾಮಿ ಅವರ ಬಗ್ಗೆ ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಮಾಜಿ‌ ಶಾಸಕ ನೆ.ಲ. ನರೇಂದ್ರಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಭಿಕರೊಬ್ಬರು “ಪೆನ್ ಡ್ರೈವ್” ಎಂದು ಕೂಗಿದರು. ಆಗ ಸಿಎಂ ಅವರು, “ನಮಗೆ ಪೆನ್ ಡ್ರೈವ್ ವಿಚಾರ ಬೇಡ, ಅವರುಗಳು ಏನು ಬೇಕಾದರೂ ಮಾಡಿಕೊಳ್ಳಲಿ. ಸೆಂಟ್ರಲ್ ಜೈಲ್ ವಿಚಾರವೆಲ್ಲ ಅವರವರದ್ದು. ಅದೆಲ್ಲವೂ ಅವರ ಸಿದ್ದಾಂತ. ಅವರಿಂದ ಯಾರ್ಯಾರ ಕುಟುಂಬ ಏನಾಯಿತು ಎಂದು ಈಗ ಮಾತನಾಡುವುದು ಬೇಡ” ಎಂದೂ ಮಾತಿನ ಬಾಣ ಬಿಟ್ಟರು.

“ನಮ್ಮನ್ನು ಏನು ಬೇಕಾದರೂ ಮಾಡಲಿ. ನಮ್ಮನ್ನು ಬೇಕಾದರೆ ಸೀಳಿ ಇಡಿ, ಸಿಬಿಐಗೆ ತೆಗೆದುಕೊಂಡು ಹೋಗಲಿ, ಯಾವ ತನಿಖೆ ಬೇಕಾದರೂ ಮಾಡಲಿ. ಆದರೆ ಅವರ ವಿರುದ್ಧ ತನಿಖೆ ಮಾಡಿದಾಗ ನ್ಯಾಯಾಲಯಕ್ಕೆ ಹೋಗಿ ಏಕೆ ತಡೆಯಾಜ್ಞೆ ತರಲಾಗುತ್ತಿದೆ. ನೀವೆಲ್ಲವೂ ಟೀಮ್ ಅಲ್ಲವೇ? ಈ ಸ್ಥಾನದಲ್ಲಿದ್ದುಕೊಂಡು ದ್ವೇಷ ಬೇಡ ಎಂದು ಆ ವಿಚಾರಗಳಿಗೆ ನಾನು ಹೋಗಿಲ್ಲ.‌ ಯಾರಿಗೂ ತೊಂದರೆ ಆಗಬಾರದು ಎಂಬುದು ನನ್ನ ಆಶಯ. ಈ ಅಧಿಕಾರ ಸಕಾರಾತ್ಮಕವಾಗಿ ಉಪಯೋಗವಾಗಬೇಕು. ಈ ಅಧಿಕಾರ ಇರುವುದು ದುರುಪಯೋಗ ಮಾಡಲು ಅಲ್ಲ. ಹತ್ತು ಜನಕ್ಕೆ ಒಳ್ಳೆಯದನ್ನು ಮಾಡಲು ಎಂಬುದು ನನ್ನ ಬದ್ಧತೆ” ಎಂದರು.

“10 ದಿನ ಸದನ ನಡೆಸಲೂ ಬಿಡಲಿಲ್ಲ. ಆನಂತರವೂ ಪಾದಯಾತ್ರೆ ಮಾಡಿದರು. ಈಗ ಕರೆದಿರುವ ಅಧಿವೇಶನದಲ್ಲಿ ಬೇರೆ ವಿಚಾರ ಮಾತನಾಡುವಂತಿಲ್ಲ.‌ ಕೇವಲ ರೈತರ ವಿಚಾರ ಮಾತ್ರ. ಕಸ್ತೂರಿ ರಂಗನ್ ವರದಿ ಜಾರಿಗೆ ತಂದವರು ಯಾರು? ಇದರ ಬಗ್ಗೆ ಚರ್ಚೆ
ಮಾಡಲಿ, ಬಿಡಲಿ. ಅದು ಅವರಿಗೆ ಬಿಟ್ಟಿದ್ದು. ಆನಂತರ ಅವರು ಗದೆಯಾದರೂ ಬೀಸಲಿ, ಬಾಣವನ್ನಾದರೂ ಬಿಡಲಿ. ಇದನ್ನು ಅನುಭವಿಸಲು ನಮ್ಮ ಪಕ್ಷ, ನಾವು ಹಾಗೂ ಕಾರ್ಯಕರ್ತರು ಸಿದ್ಧರಿದ್ದೇವೆ” ಎಂದರು.‌

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles