ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

On: March 10, 2025 5:12 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-03-2025

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.

ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರ ಕಲಾವಿದರ ಪೂರ್ಣ ವಿಳಾಸ/ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾ.29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಮತ್ತು ವೆಬ್‌ಸೈಟ್ https://kpp.karnataka.gov.in , ದೂ.080-22484516/ 22107704 ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment