SUDDIKSHANA KANNADA NEWS/ DAVANAGERE/ DATE:12-03-2025
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿರುವ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಜ್ಯಪಾಲರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಕಾನೂನುಬಾಹಿರವಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ದುರಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ನಿಯೋಗವು ಆಗ್ರಹಿಸಿದೆ.
ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಿಯೋಗವು ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ರಾಜ್ಯ ಸರ್ಕಾರದ ಈ ನಿರ್ಧಾರ ಖಂಡನೀಯ. ಆದಷ್ಟು ಬೇಗ ನಿರ್ಧಾರ ವಾಪಸ್ ಪಡೆಯುವಂತೆ
ಸೂಚನೆ ನೀಡಬೇಕು ಎಂದು ನಿಯೋಗವು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ನ ನಾಯಕ ಭೋಜೆಗೌಡ, ಬಿಜೆಪಿ ಮತ್ತು ಜೆಡಿಎಸ್ನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.