SUDDIKSHANA KANNADA NEWS/ DAVANAGERE/ DATE:13-03-2025
ಬಳ್ಳಾರಿ: ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು, ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಮಕ್ಕಳು 2025-26ನೇ ಸಾಲಿಗೆ ಮಾನಸ ಗಂಗೋತ್ರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ವಿಜಯಪುರ ಜಿಲ್ಲೆ ಮತ್ತು ಶ್ರೀ ರಾಮಕೃಷ್ಣ ವಿದ್ಯಾಶಾಲಾ, ಯಾದವಗಿರಿ ಮೈಸೂರು ಇಲ್ಲಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಮಾನಸ ಗಂಗೋತ್ರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ವಿಜಯಪುರ ಇಲ್ಲಿ 5ನೇ ತರಗತಿ ಮತ್ತು ಪ್ರಥಮ ಪಿಯುಸಿ ಗೆ ಪ್ರವೇಶ ಪರೀಕ್ಷೆಯನ್ನು ಮೇ 18 ರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆ ನಡೆಸಲು ನಿಗದಿಪಡಿಸಿದೆ.
ಶ್ರೀ ರಾಮಕೃಷ್ಣ ವಿದ್ಯಾಶಾಲಾ, ಯಾದವಗಿರಿ ಮೈಸೂರು ಇಲ್ಲಿಗೆ 8ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಏ.12 ರಂದು ಬೆಳಿಗ್ಗೆ 10 ಗಂಟೆಗೆ ನಡೆಸಲಿದ್ದಾರೆ. ಪ್ರವೇಶ ಪರೀಕ್ಷೆ ಬರೆಯಲು ಇಚ್ಛಿಸುವ ಮಕ್ಕಳು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಮಾ.26 ರೊಳಗೆ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬಳ್ಳಾರಿ, ಸಿರುಗುಪ್ಪ, ಸಂಡೂರು ಹಾಗೂ ಉಪನಿರ್ದೇಶಕರ ಕಛೇರಿ, ಕೋಟೆ, ಬಳ್ಳಾರಿ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.