SUDDIKSHANA KANNADA NEWS/ DAVANAGERE/ DATE:14-03-2025
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿಯಲ್ಲಿ ವಿರೋಧಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಕುರಿತಂತೆ ಚರ್ಚೆಯೇ ಆಗಿಲ್ಲ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.