SUDDIKSHANA KANNADA NEWS/ DAVANAGERE/ DATE:14-03-2025
ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದದ್ದು ಎಂದು ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರೆ ಹೇಳಿದ್ದರೂ, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಸಲ್ಮಾನರಿಗೆ ಶೇ.10 ರಷ್ಟು ಮೀಸಲಾತಿ ನೀಡಿ ಎಂದು ಆಗ್ರಹಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಜಮೀರ್ ಅಹ್ಮದ್ ಅವರ ಆಗ್ರಹಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿರುವುದು ಸಂವಿಧಾನ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೆ, ಕೂಡಲೇ ಸಂವಿಧಾನ ವಿರೋಧಿ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ಧಿಪಡಿಸಿ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಇಕೋ ಟೂರಿಸಂಗೆ ಬೇಕಾದ ಒಳ್ಳೆಯ ಅವಕಾಶ, ಪರಿಸರ ಕರಾವಳಿ ಭಾಗದಲ್ಲಿದೆ. ಹಾಗೇ, ಬೀಚ್ ಟೂರಿಸಂ ಮೂಲಕ ಕರಾವಳಿ ಭಾಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು. ಕರಾವಳಿ ಭಾಗದ ಬಂದರುಗಳನ್ನು ಅಭಿವೃದ್ಧಿಪಡಿಸಿದರೆ ನೂರಾರು ಕೋಟಿಯ ಹೂಡಿಕೆ, ಉದ್ಯೋಗಗಳು ಇಲ್ಲಿ ಸೃಷ್ಟಿಯಾಗುತ್ತದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಎತ್ತಿನಹೊಳೆ ಯೋಜನೆಗೆ ಪರಿಹಾರವಾಗಿ ಕರಾವಳಿ ಭಾಗಕ್ಕೆ ಪಶ್ಚಿಮವಾಹಿನಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಕರಾವಳಿ ಭಾಗಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿಲ್ಲ. ಒಂದೆಡೆ ಅನುದಾನ ಕೊಡಲು ಹಣವಿಲ್ಲದೆ ವಿಶ್ವವಿದ್ಯಾಲಯ ಮುಚ್ಚುವ ಸರ್ಕಾರ, ಮತ್ತೊಂದೆಡೆ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಯನ್ನು ಸಹ ಖಾಲಿಯಿಟ್ಟಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ 440 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 412 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಮಂಜೂರಾಗಿದ್ದು, ಎಲ್ಲಾ ಹುದ್ದೆಗಳು ಖಾಲಿ ಉಳಿದಿವೆ. ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಲು ಸರ್ಕಾರ ಅದಷ್ಟು ಶೀಘ್ರದಲ್ಲಿ ಕ್ರಮ ವಹಿಸಬೇಕು ಎಂದು ಬಿಜೆಪಿ – ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.