SUDDIKSHANA KANNADA NEWS/ DAVANAGERE/ DATE:16-03-2025
ದಾವಣಗೆರೆ: 2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕರ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಆಲಸ್ಯತನ ತೊರಿಸದೆ, ಈಗಿನಿಂದಲೇ ಪರೀಕ್ಷೆಯ ಕಡೆ ಹೆಚ್ಚು ಗಮನ ಕೊಟ್ಟು ತಯಾರಿ ಆರಂಭಿಸಬೇಕೆಂದು ಸಲಹೆ ನೀಡಿದರು.
ಇದೇ ಮಾ. 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ತಯಾರಿ ಆರಂಭಿಸಿರುವ ವಿದ್ಯಾರ್ಥಿಗಳು ಯಾವುದೇ ಆತಂಕ ಇಲ್ಲದೆ ಆತ್ಮವಿಶ್ವಾಸದಿಂದ ಹಬ್ಬದ ರೀತಿಯಲ್ಲಿ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.