Home ದಾವಣಗೆರೆ ಖಾಸಗಿ ಶಾಲೆಯಲ್ಲಿ ದುರಂತ: ಮೆಟ್ಟಿಲಿನಿಂದ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಖಾಸಗಿ ಶಾಲೆಯಲ್ಲಿ ದುರಂತ: ಮೆಟ್ಟಿಲಿನಿಂದ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ!

Share
ಶಾಲೆ
Share

ರಂಗಾರೆಡ್ಡಿ (ತೆಲಂಗಾಣ): ಶಾಲೆಯ ಮೆಟ್ಟಿಲು ಇಳಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು 9 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಧಾರುಣ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ಪುರ/ಶಾದ್‌ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಮೃತ ಬಾಲಕಿಯನ್ನು 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವರ್ಣಿಕಾ (9) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಶಾಲಾ ಅವಧಿಯಲ್ಲಿ ಬಾಲಕಿ ವರ್ಣಿಕಾ ಮೆಟ್ಟಿಲುಗಳನ್ನು ಇಳಿದು ಕೆಳಗೆ ಬರುವಾಗ ಆಯತಪ್ಪಿ ಬಿದ್ದಿದ್ದಾಳೆ. ಪರಿಣಾಮ ಆಕೆಯ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ, ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣವೇ ಶಾಲೆಯ ಸಿಬ್ಬಂದಿ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಆಕೆ ಮೃತಪಟ್ಟಿದ್ದಾಳೆ.

ಈ ಇಡೀ ದುರಂತದ ದೃಶ್ಯ ಶಾಲೆಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕಿ ಮೆಟ್ಟಿಲು ಇಳಿಯುತ್ತಿದ್ದಾಗ ದಿಢೀರನೆ ಬಿದ್ದ ತಕ್ಷಣ, ಪಕ್ಕದಲ್ಲಿದ್ದ ಇತರ ವಿದ್ಯಾರ್ಥಿಗಳು ಆಕೆಗೆ ಸಹಾಯ ಮಾಡಲು ಯತ್ನಿಸಿದ್ದಾರೆ. ಬಳಿಕ ಶಿಕ್ಷಕರೊಬ್ಬರು ಆಗಮಿಸಿ ಬಾಲಕಿಯನ್ನು ಪರೀಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ಯಲು ವ್ಯವಸ್ಥೆ ಮಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಪೋಷಕರ ಆರೋಪ ಮತ್ತು ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ:

ಘಟನೆ ನಡೆದ ತಕ್ಷಣ ಶಾಲೆ ಮಂಡಳಿಯು ತಮಗೆ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ಆಸ್ಪತ್ರೆಗೆ ಸೇರಿಸಲು ವಿಳಂಬ ಮಾಡಿದೆ ಎಂದು ಮೃತ ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ನಿರಾಕರಿಸಿರುವ ಶಾಲಾ ಆಡಳಿತ ಮಂಡಳಿ, ಬಾಲಕಿಯ ತಂದೆ ಬರುವಿಕೆಗಾಗಿ ಕಾಯುತ್ತಿದ್ದೆವು ಹಾಗೂ ಮಗು ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದ ತಕ್ಷಣ ವಾಹನ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಸೇರಿಸಿದ್ದಾಗಿ ತಿಳಿಸಿದೆ.

ಪ್ರಕರಣ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಬಾಲಕಿಗೆ ಯಾವುದಾದರೂ ಆರೋಗ್ಯ ಸಮಸ್ಯೆ ಇತ್ತೇ ಎಂಬ ಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *