Home ಕ್ರೈಂ ನ್ಯೂಸ್ ಗ್ವಾಲಿಯರ್‌ನಲ್ಲಿ ಕೋಚಿಂಗ್ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪುಂಡರ ಹಲ್ಲೆ: ಸಿಸಿಟಿವಿಯಲ್ಲಿ ಸೆರೆಯಾಯ್ತು ಅಮಾನವೀಯ ಕೃತ್ಯ!
ಕ್ರೈಂ ನ್ಯೂಸ್ಬೆಂಗಳೂರು

ಗ್ವಾಲಿಯರ್‌ನಲ್ಲಿ ಕೋಚಿಂಗ್ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪುಂಡರ ಹಲ್ಲೆ: ಸಿಸಿಟಿವಿಯಲ್ಲಿ ಸೆರೆಯಾಯ್ತು ಅಮಾನವೀಯ ಕೃತ್ಯ!

Share
ವಿದ್ಯಾರ್ಥಿ
Share

ಗ್ವಾಲಿಯರ್: ಕೋಚಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪುಂಡರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈ ಇಡೀ ಅಮಾನವೀಯ ಕೃತ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ವಿವರ: ವಿದ್ಯಾರ್ಥಿನಿಯರು ಪ್ರತಿದಿನದಂತೆ ತಮ್ಮ ಕೋಚಿಂಗ್ ತರಗತಿ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಬಂದ ಪುಂಡರ ಗುಂಪೊಂದು ವಿದ್ಯಾರ್ಥಿನಿಯರ ಜೊತೆ ಅನಗತ್ಯವಾಗಿ ಗಲಾಟೆ ತೆಗೆದು, ಏಕಾಏಕಿ ಹಲ್ಲೆ ನಡೆಸಿದೆ.

ರಸ್ತೆಯಲ್ಲೇ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಲಾಗಿದ್ದು, ಸ್ಥಳೀಯರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಪೊಲೀಸ್ ತನಿಖೆ ತೀವ್ರ: ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ನಡೆಸಿದ ಆರೋಪಿಗಳ ಗುರುತು ಪತ್ತೆಹಚ್ಚಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಮೇಲೆ ನಡೆದ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles