ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Police Warning: ಕರ್ಕಶ ಸೌಂಡ್ ಸಿಸ್ಟಂ, ಡಿಜೆ ಬಳಕೆಗೆ ನಿಷೇಧ, ಮಾದಕ ವಸ್ತು – ಮದ್ಯ ಸೇವಿಸುವಂತಿಲ್ಲ: ಯಾವೆಲ್ಲಾ ಎಚ್ಚರಿಕೆ ಕೊಟ್ಟಿದೆ ಪೊಲೀಸ್ ಇಲಾಖೆ…?

On: September 17, 2023 2:54 AM
Follow Us:
POLICE WARNING
---Advertisement---

SUDDIKSHANA KANNADA NEWS/ DAVANAGERE/ DATE:17-09-2023

ದಾವಣಗೆರೆ: ಗೌರಿ- ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ (Police) ಇಲಾಖೆಯು ಕೋರಿದೆ. ಜಿಲ್ಲಾ ಪೊಲೀಸ್ ಇಲಾಖೆಯು ಎಲ್ಲಾ ರೀತಿಯ ಭದ್ರತೆ ಕೈಗೊಂಡಿದೆ. ಆದರೂ ಜನರಿಗೆ ಸೂಚನೆಗಳನ್ನು ಕೊಟ್ಟಿದೆ.

ಈ ಸುದ್ದಿಯನ್ನೂ ಓದಿ: 

ದಾವಣಗೆರೆಯ ಸಿದ್ದಗಂಗೆಯಲ್ಲಿ ಪರಿಸರಸ್ನೇಹಿ ಗಣೇಶ (Ganesha) ಮೂರ್ತಿಗಳ ನೋಡಬನ್ನಿ.. ಪೇಪರ್ ಗಣಪನ ಸ್ಪೆಷಾಲಿಟಿ ಏನು ಗೊತ್ತಾ…?

ಜಿಲ್ಲೆಯಾದ್ಯಂತ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ.ಪ್ರತಿವರ್ಷದಂತೆ ಈ ವರ್ಷವೂ ಶಾಂತಿಯುತ, ಸೌಹಾರ್ದಯುತ, ಪರಿಸರ ಕಾಳಜಿ ವಹಿಸಿ ಹಬ್ಬವನ್ನು ಆಚರಿಸಲು ಜಿಲ್ಲಾಡಳಿತವೂ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಶಾಂತಿ ಕಾಪಾಡುವ ದೃಷ್ಠಿಯಿಂದ ಸೂಕ್ತ ನಿಂಯಮಗಳನ್ನು ಸಹ ಸೂಚಿಸಲಾಗಿದ್ದು ಅದರಂತೆ ಹಬ್ಬಗಳನ್ನು ಆಚರಿಸುವ ಮೂಲಕ ಶಾಂತಿ ಮತ್ತು ಸೌಹಾರ್ದತೆಗೆ ಮಾದರಿ ಜಿಲ್ಲೆಯನ್ನಾಗಿಸೋಣ ಎಂದು ಜಿಲ್ಲಾ ಪೊಲೀಸ್ (Police) ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಕರೆ ನೀಡಿದ್ದಾರೆ.

SP MEETING IN DAVANAGERE
SP UMA PRASHANTH DAVANAGERE

ಈ ಆದೇಶ ಪಾಲನೆ ಆಗಲೇಬೇಕು…?

  • ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳ ಅನುಮತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗಲೇಂದು ದಾವಣಗೆರೆ ನಗರ ಮತ್ತು ಪ್ರತಿ ತಾಲೂಕುಗಳ ಪೊಲೀಸ್ (Police) ವೃತ್ತ ಕಛೇರಿ/ಪೊಲೀಸ್ ಠಾಣೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
  • ಗಣೇಶ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲು ಹಾಗೂ ಗಣೇಶ ವಿಸರ್ಜನೆ ಮಾಡುವಾಗ ಯಾವ ರಸ್ತೆ – ಮಾರ್ಗಗಳಲ್ಲಿ ಮೆರವಣಿಗೆ ಮಾಡುವ ಬಗ್ಗೆ ಮೊದಲೇ ಸಂಬಂಧಪಟ್ಟ ಸ್ಥಳೀಯ ಪೊಲೀಸ್ (Police) ಠಾಣೆಗೆ ತಿಳಿಸಿ ಅನುಮತಿ ಪಡೆಯಬೇಕು.
  • ಗಣೇಶ ಮೂರ್ತಿ ವಿಸರ್ಜನೆಗೆ ಈಗಾಗಲೇ ನಿಗಧಿಪಡಿಸಿದ ಸ್ಥಳದಲ್ಲಿಯೇ ನೆರವೇರಿಸಬೇಕು.
  • ಗಣೇಶ ವಿಸರ್ಜನಾ ಸಮಯದಲ್ಲಿ ಯಾವುದೇ ಜೀವ ಹಾನಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.
  • ಈಜು ಬರುವಂತಹವರು ಹಾಗೂ ಜೀವರಕ್ಷಕರ ನೇಮಕ ಮಾಡಿಕೊಳ್ಳಬೇಕು.

ಕಾನೂನು ಕೈಗೆತ್ತಿಕೊಂಡರೆ ಹುಷಾರ್:

  • ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂಥವರು ಹಾಗೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
  • ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಸಂಬಂಧ ಈಗಾಗಲೇ ಸಭೆ ನಡೆಸಿ, ಕಾನೂನು & ಸುವ್ಯವಸ್ಥೆ ಧಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಸೂಚನೆ
  • ಗಣೇಶ ಮೆರವಣಿಗೆ ವೇಳೆ ಪ್ರಚೋದನಕಾರಿ ಹಾಡು ಹಾಕುವುದು, ಪೋಸ್ಟರ್‌ಗಳ ಪ್ರದರ್ಶನಕ್ಕೆ ಅವಕಾಶ ಇಲ್ಲ.
  • ಸಾರ್ವಜನಿಕ, ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ.

ಮಾದಕ ವಸ್ತು, ಮದ್ಯ ಸೇವಿಸುವಂತಿಲ್ಲ:

  • ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆ ವೇಳೆ ಮಾದಕ ವಸ್ತು ಸೇವನೆ, ಮದ್ಯ ಸೇವನೆ ಮಾಡಬಾರದು.
  • ಈ ಬಗ್ಗೆ ಗಣೇಶ ಮಂಡಳಿಯವರು ಜವಾಬ್ದಾರಿ ತೆಗೆದುಕೊಳ್ಳುವುದು.
  • ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು ಹಾಗೂ ವಿಸರ್ಜನೆ ಮೆರವಣಿಗೆ ನಡೆಸಬೇಕು.
  • ಗಣೇಶ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಅಗತ್ಯ ಬೆಳಕಿನ ವ್ಯವಸ್ಥೆ ಮಾಡಬೇಕು. ಜನರೇಟರ್ ವ್ಯವಸ್ಥೆಯೂ ಇರಬೇಕು.
  • ಯಾವುದೇ ವಿದ್ಯುತ್ ಅವಘಡಗಳಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
  • ನಿಗಧಿತ ಸಮಯದೊಳಗೆ ಗಣೇಶ ವಿಸರ್ಜನೆ ಮಾಡಬೇಕು.
  • ಗಣೇಶ ಹಬ್ಬದ ಸಂಬಂಧ ಶುಚಿತ್ವ ಕಾಪಾಡಿಕೊಂಡು ಪ್ರಸಾದ ವ್ಯವಸ್ಥೆ ಮಾಡಿಕೊಳ್ಳಬೇಕು.
  • ಸೂಕ್ಷ್ಮ ಪ್ರದೇಶಗಳಲ್ಲಿ ಸೌಹಾರ್ದಯುತ ವರ್ತನೆ ಇರಬೇಕು.

ರೌಡಿ, ಗೂಂಡಾಗಳ ಬಗ್ಗೆ ನಿಗಾ:

  • ಗಣೇಶ ಮತು ಈದ್ ಮಿಲಾದ್ ಹಬ್ಬದ ಸಂಬಂಧ ಈಗಾಗಲೇ ರೌಡಿ ಮತ್ತು ಮತೀಯ ಗೂಂಡಾಗಳ ಮೇಲೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ನಿಗಾ ಇರಿಸಲಾಗಿದೆ.
  • ಗಣೇಶ ಪ್ರತಿಷ್ಠಾಪನ ಪೆಂಡಾಲ್‌ಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಬೇಕು. ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು.
  • ಗಣೇಶ ವಿಸರ್ಜನೆ ಮಾಡುವಾಗ ಸಾರ್ವಜನಿಕ ಆಸ್ತಿ, ಜೀವ ಹಾನಿಯಾಗದಂತೆ ಎಚ್ಚರ ವಹಿಸಬೇಕು.
  • ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಗಣೇಶ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಬೇಕು.
  • ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
  • ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ, ಧಾರ್ಮಿಕ ನಿಂದನೆ, ಸುಳ್ಳು ಸುದ್ದಿ ಹರಡಿದರೆ ಕ್ರಮ
  • ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಹಾಕುವಂತಿಲ್ಲ, ಶೇರ್ ಮಾಡುವಂತಿಲ್ಲ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ. ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಬ್ಯಾನರ್, ಬಂಟಿಂಗ್ಸ್ ಗಳನ್ನು ಹಾಕಬಾರದು. ಕೋಮು ಸೌಹಾರ್ದತೆ ಪಾಲನೆ ಮತ್ತು ಜನಸ್ನೇಹಿ ಪೊಲೀಸ್ ಆಗಿ ಕರ್ತವ್ಯ ಮಾಡಲಾಗುವುದು.

ಪೊಲೀಸ್ (Police) ಬಂದೋಬಸ್ತ್:

ದಾವಣಗೆರೆ ಜಿಲ್ಲೆಯಾದ್ಯಂತ ವಿವಿಧ ಕಡೆಗಳಲ್ಲಿ ಅಂದಾಜು 1876 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಸ್ಥಾಪಿಸುತ್ತಿರುವ ಬಗ್ಗೆ ಮಾಹಿತಿ ಇದೆ. ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment