ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂಬೇಡ್ಕರ್ ಅವರನ್ನು ನೆಹರು ವಿರೋಧಿಸಲಿಲ್ಲ: ಸಿಎಂ ಸಿದ್ದರಾಮಯ್ಯ

On: April 14, 2025 1:36 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:14-04-2025

ಬೆಂಗಳೂರು: ಮಾಜಿ ಪ್ರಧಾನಿ ಜವಾಹಾರ್ ಲಾಲ್ ನೆಹರೂ ಅವರು ಅಂಬೇಡ್ಕರ್ ಅವರನ್ನು ವಿರೋಧಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದರು.

ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment