
SUDDIKSHANA KANNADA NEWS/ DAVANAGERE/ DATE:17-04-2025
ದಾವಣಗೆರೆ: ಜಿಲ್ಲಾ ಪಂಚಾಯತ್ ಲೆಕ್ಕ ಅಧೀಕ್ಷಕರಾಗಿ, ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಎಂ.ಎ. ವೆಂಕಟೇಶ್ (60 ವರ್ಷ) ಅವರು ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ.


ದಾವಣಗೆರೆ ನಗರದ ಶ್ರೀ ಸೋಮೇಶ್ವರ ಶಾಲೆ ಬಳಿ ನಿವಾಸದಲ್ಲಿ ಮೃತರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಮೃತರು ಪತ್ನಿ. ಒಬ್ಬ ಮಗನನ್ನು ಅಗಲಿದ್ದಾರೆ. ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ರಾತ್ರಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ ಲೆಕ್ಕಪತ್ರ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಕಳೆದ ತಿಂಗಳ ಹಿಂದೆಯಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು.