ನವದೆಹಲಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಂತ್ರಿಯಾಗಿ ಅಥವಾ ಹುದ್ದೆಗೆ ಬಂದು ಇನ್ನಷ್ಟೇ ಕೆಲವು ತಿಂಗಳುಗಳಾಗಿವೆ, ಅಷ್ಟರಲ್ಲೇ 444 ಕೋಟಿ ರೂಪಾಯಿ ಅಕ್ರಮ ಮಾಡಲು ಸಾಧ್ಯವೇ? ಅದೆಲ್ಲವೂ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ” ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ತಳ್ಳಿ ಹಾಕಿದ್ದಾರೆ.
ಲೋಕಾಯುಕ್ತಕ್ಕೆ ಯತೀಂದ್ರ ಸಿದ್ದರಾಮಯ್ಯರ ವಿರುದ್ಧ ದೂರು ನೀಡಿರುವ ಕುರಿತಂತೆ ಈ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಶಿಕ್ಷಣ ನೀತಿ ಕುರಿತು ಪ್ರಮುಖ ಸಭೆ
ತಮ್ಮ ದೆಹಲಿ ಪ್ರವಾಸದ ಕುರಿತು ವಿವರಣೆ ನೀಡಿದ ಸಿಎಂ, “ಇವತ್ತು ನಾವು ದೆಹಲಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಶಿಕ್ಷಣ ನೀತಿ (Education Policy) ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವ ಬಗ್ಗೆ ಮಹತ್ವದ ಸಭೆ ನಡೆಸಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ತಮಿಳುನಾಡು, ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶದ ಸಚಿವರು ಮತ್ತು ಸಿಎಂಗಳು ಭಾಗವಹಿಸಿದ್ದರು. ಕೆಪಿಎಸ್‍ಸಿ ಸೇರಿದಂತೆ ಎಲ್ಲಾ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಹಾಗೂ ಪೇಪರ್ ಲೀಕ್ ತಡೆಯುವ ಕುರಿತು ಹೈಕಮಾಂಡ್ ನಾಯಕರು ನಮಗೆ ಸ್ಪಷ್ಟ ಮಾರ್ಗದರ್ಶನ ನೀಡಿದ್ದಾರೆ. ನಾವು ಸಚಿವ ಯು ಟಿ ಖಾದರ್ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೂಲಕ ಶಿಕ್ಷಣ ರಂಗದಲ್ಲಿ ಸುಧಾರಣೆ ತರಲು ಬದ್ಧರಾಗಿದ್ದೇವೆ” ಎಂದರು.
“ಕೆಲವು ರಾಜ್ಯಗಳಲ್ಲಿ ಬಿಜೆಪಿ ಸಿದ್ಧಾಂತವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮಲ್ಲಿ ಮೊದಲಿನಿಂದಲೂ ಇರುವ ತತ್ವಗಳ ಆಧಾರದ ಮೇಲೆ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಕ್ರಮ ವಹಿಸಲು ಮಾರ್ಗದರ್ಶನವಿದೆ” ಎಂದರು.
ಗುತ್ತಿಗೆದಾರರ ಬಾಕಿ ಹಣದ ಬಿಡುಗಡೆ ಕೋರಿಕೆ
ಗುತ್ತಿಗೆದಾರರ ಸಂಘವು ₹38,000 ಕೋಟಿ ಬಾಕಿ ಹಣ ಬಿಡುಗಡೆಗೆ ಬರೆದಿರುವ ಪತ್ರದ ಕುರಿತು ಮಾತನಾಡಿ, “ಹಿಂದಿನ ಯಡಿಯೂರಪ್ಪನವರ ಸರ್ಕಾರ ಅಷ್ಟೊಂದು ಜಾಸ್ತಿ ಕೆಲಸಗಳನ್ನು ಕೊಟ್ಟು ಆರ್ಥಿಕ ಹೊರೆ ಹಾಕಿ ಹೊರಟುಹೋದರು. ಪತಿಕಾ ಗೋಷ್ಠಿ ನಡೆಸುತ್ತಿರುವವರಿಗೆ ಇದಕ್ಕೆ ಪರಿಹಾರ ಸೂಚಿಸಲು ಹೇಳಿ ಎಂದು ವ್ಯಂಗ್ಯವಾಡಿದರು. ಪರಿಸ್ಥಿತಿ ಕಷ್ಟವಿದೆ, ಆದರೂ ಅದರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.





Leave a comment