Home ಕ್ರೈಂ ನ್ಯೂಸ್ ಸಿಇಸಿ ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ: ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಸಿಇಸಿ ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ: ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

Share
ಜ್ಞಾನೇಶ್ ಕುಮಾರ್‌
Share

ತಿರುವನಂತಪುರಂ: ಹಾಲಿ ಮುಖ್ಯ ಚುನಾವಣಾ ಯುಕ್ತ (CEC) ಜ್ಞಾನೇಶ್ ಕುಮಾರ್ ಅವರು ಕೇರಳದಲ್ಲಿ ಲೋಕೋಪಯೋಗಿ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಮಲೇಷ್ಯಾ ಮೂಲದ ಸಿವಿಲ್ ಎಂಜಿನಿಯರ್ ಲೀ ಸೀ ಬೀನ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ವಿಜಿಲೆನ್ಸ್ ತನಿಖೆಗೆ ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಕೇರಳ ರಾಜ್ಯ ಸಾರಿಗೆ ಯೋಜನೆಯ (KSTP) ಅಡಿಯಲ್ಲಿ ಎಂ.ಸಿ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿಯಲ್ಲಿ ತೊಡಗಿದ್ದ PATI-BEL ಕನ್ಸೋರ್ಟಿಯಂಗೆ ಸೇರಿದ ಮಲೇಷ್ಯಾ ಎಂಜಿನಿಯರ್ ಲೀ ಸೀ ಬೀನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಡೆತ್ ನೋಟ್‌ನಲ್ಲಿ ಜ್ಞಾನೇಶ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿತ್ತು.

ಪ್ರಮುಖ ಆರೋಪಗಳು:

ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆ ನೀಡಿಕೆಯಲ್ಲಿ ಜ್ಞಾನೇಶ್ ಕುಮಾರ್ ಅಕ್ರಮ ಎಸಗಿದ್ದಾರೆ ಎಂಬ ಆರೋಪವಿದೆ.

ಈ ಹಿಂದೆ ನಡೆಸಲಾದ ತನಿಖೆಯನ್ನು ರಾಜಕೀಯ ಹಾಗೂ ಬಾಹ್ಯ ಪ್ರಭಾವದಿಂದ ಅರ್ಧಕ್ಕೇ ಮುಚ್ಚಿಹಾಕಲಾಗಿತ್ತು ಎಂದು ದೂರುದಾರ ಮಲಯಂ ಕೀಳು ವೇಣುಗೋಪಾಲ್ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗೃಹ ಸಚಿವರು ವಿಜಿಲೆನ್ಸ್ ನಿರ್ದೇಶಕರಿಗೆ ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಿಂದ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಹಳೆಯ ಪ್ರಕರಣ ಮರುಜೀವ ಪಡೆದುಕೊಂಡಿದೆ.

Share

Leave a comment

Leave a Reply

Your email address will not be published. Required fields are marked *

Related Articles