Home ಕ್ರೈಂ ನ್ಯೂಸ್ ವೀರ ಪೈಲಟ್ ಸ್ಮಿತ್ ಮಚ್ಛಾರ್ ವಿಚಾರದಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ಮೌನ: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿಯೇ?
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ವೀರ ಪೈಲಟ್ ಸ್ಮಿತ್ ಮಚ್ಛಾರ್ ವಿಚಾರದಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ಮೌನ: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿಯೇ?

Share
ಸ್ಮಿತ್ ಮಚ್ಛಾರ್
Share

ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಪ್ರಾಣಾಪಾಯದಲ್ಲಿದ್ದರೂ ನೂರಾರು ಪ್ರಯಾಣಿಕರನ್ನು ರಕ್ಷಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ವಿಚಾರದಲ್ಲಿ ಕಾಂಗ್ರೆಸ್ ವಹಿಸಿರುವ ಮೌನವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ವಿಪಕ್ಷದ ನಡವಳಿಕೆಯು ಅದರ ಆದ್ಯತೆಗಳು ಮತ್ತು ಧೋರಣೆಯನ್ನು ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಂಶು ತ್ರಿವೇದಿ, “ಶಾಂತಿ ಮತ್ತು ಅಹಿಂಸೆಯ ಸಂಕೇತವಾದ ಮಹಾತ್ಮ ಗಾಂಧೀಜಿಯವರ ಜಯಂತಿಯಂದೇ ಕಾಂಗ್ರೆಸ್ ಪಕ್ಷವು ಆರಾಧನಾ ಮಿಶ್ರಾ ‘ಮೋನಾ’ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಹಾಗೂ ಇಮ್ರಾನ್ ಮಸೂದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಇಮ್ರಾನ್ ಮಸೂದ್ ಮತ್ತು ‘ಭಾರತ್ ಮಾತಾ ಕಿ ಜೈ’ ಘೋಷಣೆಗೆ ತಡೆ ಒಡ್ಡಿದ್ದ ಆರೋಪವಿರುವ ಆರಾಧನಾ ಮಿಶ್ರಾ ಅವರಿಗೆ ಉನ್ನತ ಹುದ್ದೆ ನೀಡಿರುವುದು ಮಹಾತ್ಮ ಗಾಂಧಿ ಮತ್ತು ಇಂದಿನ ಕಾಂಗ್ರೆಸ್ ಗಾಂಧಿಗಳ ನಡುವಿನ ವ್ಯತ್ಯಾಸವನ್ನು ತೋರಿಸುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ವಿಷಯದಲ್ಲಿ ಗಾಂಧಿ ಕುಟುಂಬದ ಮೌನ:

ದುಬೈನಿಂದ ಟೆಲ್ ಅವಿವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಹ-ಪೈಲಟ್ ವಿಮಾನವನ್ನು ಪತನಗೊಳಿಸಲು ಯತ್ನಿಸಿದಾಗ, ತೀವ್ರವಾಗಿ ಗಾಯಗೊಂಡರೂ ಸಾಹಸದಿಂದ 174 ಪ್ರಯಾಣಿಕರ ಪ್ರಾಣ ಉಳಿಸಿದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಅವರ ಶೌರ್ಯವನ್ನು ಶ್ಲಾಘಿಸಲು ಕಾಂಗ್ರೆಸ್ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಘಟನೆಯ ಕುರಿತು ಮೌನ ತಳೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles