Home ಕ್ರೈಂ ನ್ಯೂಸ್ ‘ಇದು ಮಹಿಳೆಯರಿಗೆ ನೀಡುವ ಗೌರವವೇ?’: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

‘ಇದು ಮಹಿಳೆಯರಿಗೆ ನೀಡುವ ಗೌರವವೇ?’: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ!

Share
ಪ್ರಿಯಾಂಕಾ ಗಾಂಧಿ
Share

ನವದೆಹಲಿ: ನವದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 3 ರಂದು ನಡೆದ ಪ್ರತಿಭಟನೆಯ ವರದಿಗಾರಿಕೆ ಮಾಡುವಾಗ ಮೂವರು ಮಹಿಳಾ ಪತ್ರಕರ್ತೆಯರ ಮೇಲೆ ದೆಹಲಿ ಪೊಲೀಸರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (X) ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, “ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ ಪೊಲೀಸರೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲವು ಪತ್ರಕರ್ತರು ಪ್ರತಿಭಟನೆ ನಡೆಸಿದರೂ ಇದುವರೆಗೆ ಯಾವುದೇ ಎಫ್‌ಐಆರ್ (FIR) ದಾಖಲಾಗಿಲ್ಲ ಮತ್ತು ಸೂಕ್ತ ಕ್ರಮ ಜರುಗಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಪೊಲೀಸರಿಂದಲೇ ಮಹಿಳೆಯರು ಬೆದರಿಕೆ ಅನುಭವಿಸುವಂತಾಗಿದೆ. ಕಾಲೇಜು ವಿದ್ಯಾರ್ಥಿನಿಯರಿಂದ ಹಿಡಿದು ಪತ್ರಕರ್ತೆಯರವರೆಗೆ ಎಲ್ಲೆಡೆ ಮಹಿಳೆಯರು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ನರೇಂದ್ರ ಮೋದಿ ಅವರೇ, ಅಮಿತ್ ಶಾ ಅವರೇ, ಮಹಿಳೆಯರೊಂದಿಗೆ ಈ ರೀತಿ ನಡೆದುಕೊಳ್ಳುವುದು ಸೂಕ್ತವೇ? ಇದು ತಪ್ಪಾಗಿದ್ದರೆ ನೀವು ಏಕೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಪ್ರತಿಭಟನೆ ವೇಳೆ ಸಹಾಯಕ ಪೊಲೀಸ್ ಕಮಿಷನರ್ (ACP) ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳಾ ಪತ್ರಕರ್ತೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಗೆ ಭಾರತೀಯ ಪತ್ರಿಕಾ ಮಂಡಳಿ (Press Council of India) ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಕ್ರೈಂ ಬ್ರಾಂಚ್‌ಗೆ ಪ್ರಕರಣ ವರ್ಗಾವಣೆ:

ಈ ಆರೋಪಗಳ ಕುರಿತು ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ನವದೆಹಲಿ ಜಿಲ್ಲಾ ಪೊಲೀಸರಿಗೆ ದೂರುಗಳು ಬಂದಿದ್ದು, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ತನಿಖೆಗಾಗಿ ಪ್ರಕರಣವನ್ನು ಕ್ರೈಂ ಬ್ರಾಂಚ್  ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ಕ್ರೈಂ ಬ್ರಾಂಚ್ ಅಧಿಕಾರಿಗಳು ದೂರುದಾರರ ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles