Home ಕ್ರೈಂ ನ್ಯೂಸ್ ದಾವಣಗೆರೆ: ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ಸಭೆ, ಸಮಾರಂಭ, ಸುದ್ದಿಗೋಷ್ಠಿಗೆ ಬ್ರೇಕ್; ಶಾಂತಿ ಕಾಪಾಡಲು ಡಿಸಿ ಕಟ್ಟುನಿಟ್ಟಿನ ಕ್ರಮ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ: ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ಸಭೆ, ಸಮಾರಂಭ, ಸುದ್ದಿಗೋಷ್ಠಿಗೆ ಬ್ರೇಕ್; ಶಾಂತಿ ಕಾಪಾಡಲು ಡಿಸಿ ಕಟ್ಟುನಿಟ್ಟಿನ ಕ್ರಮ!

Share
ದಾವಣಗೆರೆ
Share

ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದ ಆವರಣದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಮಠದ ಆಸ್ತಿಯನ್ನು ರಕ್ಷಿಸುವ ಹಿತದೃಷ್ಟಿಯಿಂದ ಅಕ್ಟೋಬರ್‌ 31 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆಯ ಅವಧಿಯಲ್ಲಿ ಮಠದ ಆವರಣದಲ್ಲಿ ನಿತ್ಯ ನಡೆಯುವ ಧಾರ್ಮಿಕ ಪೂಜಾ ವಿಧಾನಗಳನ್ನು ಹೊರತುಪಡಿಸಿ, ಯಾವುದೇ ರೀತಿಯ ಸಭೆ-ಸಮಾರಂಭಗಳು ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾನೂನು ಬಾಹಿರವಾಗಿ ಜನ ಸೇರುವುದಾಗಲಿ ಅಥವಾ ಶಾಂತತೆಗೆ ಭಂಗ ತರುವಂತಹ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಾಗಲಿ ಮಾಡಬಾರದು ಎಂದು ಜಿಲ್ಲಾ ದಂಡಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles