Home ಕ್ರೈಂ ನ್ಯೂಸ್ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡ್ಲೇಬೇಕೆಂದು ರೊಚ್ಚಿಗೆದ್ದ ರಾಹುಲ್ ಗಾಂಧಿ: ಆಕಾಶವಾಣಿ ಭವನ ತೆರವುಗೊಳಿಸಿದ ದೆಹಲಿ ಪೊಲೀಸ್, ರಾಹುಲ್-ಪ್ರಿಯಾಂಕಾ ಕಸ್ಟಡಿಗೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡ್ಲೇಬೇಕೆಂದು ರೊಚ್ಚಿಗೆದ್ದ ರಾಹುಲ್ ಗಾಂಧಿ: ಆಕಾಶವಾಣಿ ಭವನ ತೆರವುಗೊಳಿಸಿದ ದೆಹಲಿ ಪೊಲೀಸ್, ರಾಹುಲ್-ಪ್ರಿಯಾಂಕಾ ಕಸ್ಟಡಿಗೆ!

Share
ರಾಹುಲ್ ಗಾಂಧಿ
Share

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿಯಾ’  ಒಕ್ಕೂಟ ನಡೆಸಿದ ಪ್ರತಿಭಟನಾ ಮೆರವಣಿಗೆ ದೆಹಲಿಯಲ್ಲಿ ತೀವ್ರ ಹೈಡ್ರಾಮಾಗೆ ಸಾಕ್ಷಿಯಾಯಿತು.

ಸಂಸತ್ ಭವನದ ಮಕರ ದ್ವಾರದಿಂದ ಚುನಾವಣಾ ಆಯೋಗದ (ECI) ಕಚೇರಿಯತ್ತ ಮೆರವಣಿಗೆ ಹೊರಟಿದ್ದ ವಿರೋಧ ಪಕ್ಷಗಳ ನಾಯಕರನ್ನು ದೆಹಲಿ ಪೊಲೀಸರು ಆಕಾಶವಾಣಿ ಭವನದ ಬಳಿ ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಈ ವೇಳೆ ಪೊಲೀಸರ ತಡೆಯನ್ನು ಮೀರಿ ಮುನ್ನಡೆಯಲು ಯತ್ನಿಸಿದಾಗ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಪೊಲೀಸರು ಕಸ್ಟಡಿಗೆ ಪಡೆದರು.

ಆಕಾಶವಾಣಿ ಭವನದಲ್ಲಿ ಧರಣಿ:

ಪೋಲಿಸರು ಮಾರ್ಗ ಮಧ್ಯೆ ತಡೆದಾಗ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತರು. “ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾಗುವವರೆಗೂ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು. ಹಲವು ಗಂಟೆಗಳ ಕಾಲ ನಡೆದ ಪ್ರತಿಭಟನೆಯ ನಂತರ ಪೊಲೀಸರು ಇಡೀ ಆವರಣವನ್ನು ತೆರವುಗೊಳಿಸಿ ನಾಯಕರನ್ನು ಬಸ್‌ಗಳಲ್ಲಿ ಕರೆದೊಯ್ದರು.

ಚುನಾವಣಾ ಆಯೋಗವು ತನ್ನ ನಿರ್ಧಾರಗಳು ಸರ್ವಾನುಮತದಿಂದ ತಗೆದುಕೊಂಡಿದ್ದು, ನಿಯಮಾವಳಿ ಪ್ರಕಾರವೇ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರತಿಪಾದಿಸಿ ಪ್ರತಿಭಟನಾಕಾರರ ಆರೋಪಗಳನ್ನು ತಳ್ಳಿಹಾಕಿದೆ.
Share

Leave a comment

Leave a Reply

Your email address will not be published. Required fields are marked *

Related Articles