Home ದಾವಣಗೆರೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಮುಕ್ತ, ಪಾರದರ್ಶಕ ಹಾಗೂ ದಕ್ಷತೆಯಿಂದ ಪ್ರಕ್ರಿಯೆ ಪೂರ್ಣ, 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ದಾವಣಗೆರೆನವದೆಹಲಿಬೆಂಗಳೂರು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಮುಕ್ತ, ಪಾರದರ್ಶಕ ಹಾಗೂ ದಕ್ಷತೆಯಿಂದ ಪ್ರಕ್ರಿಯೆ ಪೂರ್ಣ, 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

Share
ದಾವಣಗೆರೆ
Share

ದಾವಣಗೆರೆ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ದಕ್ಷತೆಯಿಂದ ಮತ್ತು ಪ್ರಾಮಾಣಿಕವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಉತ್ತಮ ಕೆಲಸ ಮಾಡುವ ಮೂಲಕ ಯಾವುದೇ ದೂರುಗಳಿಗೆ ಆಸ್ಪದ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ಕುರಿತು ಹಾಗೂ ಚುನಾವಣೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶೇಕಡಾ 100ರಷ್ಟು ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟು 7,086 ನೋಟಿಸ್‌ಗಳನ್ನು ನೀಡಲಾಗಿದೆ. ಇದರಲ್ಲಿ 180 ಮತದಾರರು  ಮೃತಪಟ್ಟವರು ಮತ್ತು ಎರಡು ಕಡೆ ಇರುವವರು, ನೇಪಾಳಿ 5 ಪ್ರಜೆಗಳು, ವಿದೇಶದಲ್ಲಿರುವ ಒಬ್ಬರು ಮಾತ್ರ ಪಟ್ಟಿಯಿಂದ ತಿರಸ್ಕರಿಸಲಾಗಿದೆ. ಇದಕ್ಕೆ ದಾಖಲೆ ಸಮೇತ ಕಾರಣ ತಿಳಿಸಿ ಈ ಎಲ್ಲಾ ಪಟ್ಟಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗಳ ಜೊತೆ ಹಂಚಿಕೊಳ್ಳಲಾಗಿದೆ. ಯಾವ ಪಕ್ಷ ಮತ್ತು ಯಾವ ಕ್ಷೇತ್ರವೆಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.  ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್‌ 27 ರಂದು ಪ್ರಕಟಿಸಲಾಗುವುದು ಎಂದರು.

ನಮೂನೆ 6, 6A, 7 ಮತ್ತು 8ರ ಮತದಾರರ ಪಟ್ಟಿಗೆ ಸೇರ್ಪಡೆ, ಪಟ್ಟಿಯಲ್ಲಿನ ಹೆಸರು ತಿದ್ದುಪಡಿ , ಮತಪಟ್ಟಿಯಿಂದ ವರ್ಗಾವಣೆ ಮಾಹಿತಿಯನ್ನು ಕೂಡ ಜಿಲ್ಲೆಯ ಎಲ್ಲಾ  ರಾಜಕೀಯ ಪಕ್ಷಗಳಿಗೆ ಒದಗಿಸಲಾಗಿದೆ. ಮತದಾರರ ಪಟ್ಟಿಗೆ ಸೇರ್ಪಡೆ, ಪಟ್ಟಿಯಲ್ಲಿನ ಹೆಸರು ತಿದ್ದುಪಡಿ , ಮತಪಟ್ಟಿಯಿಂದ ವರ್ಗಾವಣೆ ನಿರಂತರ ಪ್ರಕ್ರಿಯೆಯಾಗಿದ್ದು ಮತದಾರರು ಯಾವಾಗ  ಬೇಕಾದರೂ ಈ ಪ್ರಕ್ರಿಯೆಗಳನ್ನು ಕೖಗೊಳ್ಳಬಹುದು ಎಂದು ತಿಳಿಸಿದರು.

 ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಸುತ್ತೋಲೆಗಳಂತೆ ಎಲ್ಲಾ ಸಿಬ್ಬಂದಿ ಅಧಿಕಾರಿಗಳು ತಮ್ಮನ್ನು ತಾವು ತೊಡಗಿಸಿಕೊಂಡು ಎಸ್.ಐ. ಆರ್  ಕೆಲಸವನ್ನು ಪರಿಪೂರ್ಣವಾಗಿ ಮುಗಿಸಿಕೊಟ್ಟಿದ್ದಾರೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles