Home ಕ್ರೈಂ ನ್ಯೂಸ್ ನಾನವನಲ್ಲ… ನಾನವನಲ್ಲ.. ನನಗೂ ಆ ವಿಡಿಯೋಗೂ ಯಾವುದೇ ಸಂಬಂಧವಿಲ್ಲ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯರಿಂದ ಕಾನೂನು ಹೋರಾಟದ ಎಚ್ಚರಿಕೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ನಾನವನಲ್ಲ… ನಾನವನಲ್ಲ.. ನನಗೂ ಆ ವಿಡಿಯೋಗೂ ಯಾವುದೇ ಸಂಬಂಧವಿಲ್ಲ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯರಿಂದ ಕಾನೂನು ಹೋರಾಟದ ಎಚ್ಚರಿಕೆ!

Share
ಸಿದ್ದರಾಮಯ್ಯ
Share

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ರಾಜಕೀಯ ದುರುದ್ದೇಶದಿಂದ ಚಾರಿತ್ರ್ಯಹನನ ಮಾಡುವ ಪ್ರಯತ್ನ ನಡೆಯುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸುಳ್ಳು ಅಪಪ್ರಚಾರವನ್ನು ತಡೆಯಲು ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಕೋರಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ವಿವರಣೆ ನೀಡಿರುವ ಅವರು, ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಹೇಳಿದ್ದಾರೆ. ತೆರೆದ ಪುಸ್ತಕದಂತಿರುವ ತಮ್ಮ ಐದು ದಶಕಗಳ ರಾಜಕೀಯ ಜೀವನದ ಅರಿವು ರಾಜ್ಯದ ಜನತೆಗಿದೆ ಎಂಬ ಸಂಪೂರ್ಣ ವಿಶ್ವಾಸವಿದ್ದು, ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎಂದು ಅವರು ಧೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಾರಿತ್ರ್ಯಹನನ ಯತ್ನ: ರಾಜಕೀಯ ದುರುದ್ದೇಶದಿಂದ ಸುಳ್ಳು ವಿಡಿಯೋ ಬಳಸಿ ಅಪಪ್ರಚಾರ ನಡೆಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ.

ನ್ಯಾಯಾಲಯದ ತಡೆಯಾಜ್ಞೆ: ಸಂಬಂಧವಿಲ್ಲದ ಸ್ಟಿಂಗ್ ಆಪರೇಷನ್ ವಿಡಿಯೋವನ್ನು ಯಾವುದೇ ಪತ್ರಿಕೆ, ಚಾನೆಲ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಮತ್ತು ಪ್ರಸಾರ ಮಾಡದಂತೆ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಹಾಗೂ ಆದೇಶ ಪಡೆದಿರುವುದು.

ಜನರ ವಿಶ್ವಾಸ: ಐದು ದಶಕಗಳ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ.

ತಮ್ಮ ಆತ್ಮಸಾಕ್ಷಿಗೆ ತಾವೇ ಸಂಪೂರ್ಣ ನಿರಪರಾಧಿ ಎಂಬುದು ತಿಳಿದಿದೆ ಎಂದು ತಿಳಿಸಿರುವ ಸಿದ್ದರಾಮಯ್ಯ, ಈ ಅಪಪ್ರಚಾರಗಳಿಗೆ ಯಾವುದೇ ಭಯವಿಲ್ಲದೆ ಮುನ್ನೆಚ್ಚರಿಕೆಯಾಗಿ ಕಾನೂನು ಹೋರಾಟಕ್ಕಿಳಿದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *